ಮನೆ ಕಾನೂನು ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಕೆಗೆ ಅವಕಾಶ ಕೋರಿದ ಅರ್ಜಿ ವಜಾಗೊಳಿಸಿದ ಅಲಹಾಬಾದ್‌ ಹೈಕೋರ್ಟ್‌

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಕೆಗೆ ಅವಕಾಶ ಕೋರಿದ ಅರ್ಜಿ ವಜಾಗೊಳಿಸಿದ ಅಲಹಾಬಾದ್‌ ಹೈಕೋರ್ಟ್‌

0

ಲಖನೌ: ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಗೆ ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯೊಂದನ್ನು ವಜಾಗೊಳಿಸಿರುವ ಅಲಹಾಬಾದ್‌ ಹೈಕೋರ್ಟ್‌, ‘ಧ್ವನಿವರ್ಧಕಗಳು ಮೂಲಭೂತ ಹಕ್ಕಲ್ಲ’ ಎಂದು ಅಭಿಪ್ರಾಯಪಟ್ಟಿದೆ.

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕು ಅಲ್ಲ ಎಂದು ಕಾನೂನು ಹೇಳುತ್ತದೆ ಎಂದು ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರನ್ನೊಳಗೊಂಡ ವಿಭಾಗೀಯ ಪೀಠ ಹೇಳಿದೆ.

ಡಿಸೆಂಬರ್ 3, 2021 ರಂದು ಬದೌನ್ ಜಿಲ್ಲೆಯ ಬಿಸೌಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟರು(ಎಸ್‌ಡಿಎಂ) ನೀಡಿದ್ದ ಆದೇಶವನ್ನು ಪ್ರಶ್ನಿಸಿ ಇರ್ಫಾನ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು.ಧೋರನ್‌ಪುರ ಗ್ರಾಮದ ನೂರಿ ಮಸೀದಿಯಲ್ಲಿ ಆಜಾನ್‌ಗಾಗಿ ಧ್ವನಿವರ್ಧಕ ಅಳವಡಿಸಲು ಮ್ಯಾಜಿಸ್ಟ್ರೇಟರು ಈ ಹಿಂದೆ ಅನುಮತಿ ನಿರಾಕರಿಸಿದ್ದರು.

ಮ್ಯಾಜಿಸ್ಟ್ರೇಟರ ಅದೇಶವು ಕಾನೂನುಬಾಹಿರ. ಇದು ‘ಮೂಲಭೂತ ಹಕ್ಕು’ಗಳು ಮತ್ತು ‘ಕಾನೂನಾತ್ಮಕ ಹಕ್ಕು’ಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ತಮ್ಮ ಮನವಿಯಲ್ಲಿ ವಾದಿಸಿದ್ದರು.