ಮನೆ ಕಾನೂನು ಅಕ್ರಮ ಆಸ್ತಿ ಸಂಪಾದನೆ ಆರೋಪ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಸಂಪಾದನೆ ಆರೋಪ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ

0

ಬೆಳಗಾವಿ: ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Join Our Whatsapp Group

ವದತ್ತಿ ತಾಲ್ಲೂಕಿನ ಉಗರಗೋಳದಲ್ಲಿರುವ ಗೋವಿಂದಪ್ಪ ಸಂಬಂಧಿಕರ ಫಾರ್ಮ್ ಹೌಸ್ ಮೇಲೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯಾಗಿದೆ.

ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವೆಂಕಟೇಶ ಎಂಬುವರ ಬೆಳಗಾವಿ ಮನೆಯ ಮೇಲೆ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ವೆಂಕಟೇಶ ಅವರು ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸಿದ್ದರು‌.

ಅದೇರೀತಿ ನಿಪ್ಪಾಣಿ ತಾಲೂಕಿನ ಬೋರಗಾವ್ ದಲ್ಲಿ ಗ್ರಾಮ ಲೆಕ್ಕಾಧಿಕಾರಿ ವಿಠಲ್ ಡವಳೇಶ್ವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಯಾಗಿರುವ ವಿಠಲ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.