ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ಅವರ ಮೇಲೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸೇವೆಯಿಂದ ವಜಗೊಳಿಸಲಾಗಿದೆ.
ಸಿಪಿಐ ಜಿ.ಬಿ ಉಮೇಶ್ ಅಮಾನತುಗೊಳಿಸುವಂತೆ ದಾವಣಗೆರೆ ಪೂರ್ವವಲಯ ಐಜಿಪಿ ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ತನ್ನ ಸೋದರ ಮಾವನ ಮಗ ಜಿ.ಬಿ. ಉಮೇಶ್ ವಿರುದ್ಧ ಅತ್ಯಾಚಾರ, ಜೀವಬೆದರಿಕೆ ಆರೋಪ ಮಾಡಿ ಯುವತಿ ದೂರು ನೀಡಿದ್ದರು.
5 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಉಮೇಶ್ ನಿರಂತರವಾಗಿ ಅತ್ಯಾಚಾರ, ಮಾಡಿದ್ದು, ಪರಿಣಾಮವಾಗಿ ಐದು ಬಾರಿ ಗರ್ಭಪಾತ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾರೆ ಎನ್ನಲಾಗಿದೆ.
Saval TV on YouTube