Saval TV on YouTube
ಬೆಂಗಳೂರು(Bengaluru): ತೆರಿಗೆ ವಂಚನೆ ಆರೋಪದ ಮೇಲೆಪ್ರತಿಷ್ಠಿತ ಕಾರ್ಪೊರೇಟ್ ಕಂಪನಿಗಳ ವ್ಯವಸ್ಥಾಪಕರು, ನಿರ್ದೇಶಕರುಗಳು ಹಾಗೂ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಸಂಜಯನಗರದ ರಾಜ್ ವಿಲಾಸ್ ಪ್ಯಾಲೇಸ್, ಕೊಡಿಗೇಹಳ್ಳಿ ಬ್ರಿಗೇಡ್ ಹೋಪ್ ಅಪಾರ್ಟ್ಮೆಂಟ್, ಹೆಬ್ಬಾಳ, ಚಿಕ್ಕಬಳ್ಳಾಪುರ, ರಾಮನಗರದ ಬಿಡದಿಯ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಶೋಧಕಾರ್ಯ ಮುಂದುವರೆಸಿದ್ದಾರೆ.
ದೀರ್ಘಕಾಲದಿಂದ ಸರ್ಕಾರಕ್ಕೆ ತೆರಿಗೆ ಪಾವತಿಸದೇ ವಂಚನೆ ಹಾಗೂ ಸಾಕಷ್ಟು ಅವ್ಯವಹಾರಗಳು ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಅಧಿಕಾರಿಗಳು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.














