ಮನೆ ಅಪರಾಧ ವಸತಿ ಶಾಲಾ ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ : ಸಿಬ್ಬಂದಿ ವಿರುದ್ಧ ಎಫ್ ಐ ಆರ್...

ವಸತಿ ಶಾಲಾ ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ : ಸಿಬ್ಬಂದಿ ವಿರುದ್ಧ ಎಫ್ ಐ ಆರ್ ದಾಖಲು

0

ಚಾಮರಾಜನಗರ: ಅಪ್ರಾಪ್ತ ಬಾಲಕಿಯರ ಜೊತೆ ವಸತಿ ನಿಲಯದ ಸಿಬ್ಬಂದಿ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ಎಫ್ ಐಆರ್ ದಾಖಲಾಗಿದೆ.

Join Our Whatsapp Group

ಗುಂಡ್ಲುಪೇಟೆ ತಾಲೂಕಿನಲ್ಲಿ ಮೇಲುಕಾಮನಹಳ್ಳಿಯ  ಮೊರಾಜಿ ವಸತಿ ಶಾಲೆಯಲ್ಲಿ ಈ  ಘಟನೆ ನಡೆದಿದೆ. ವಸತಿ ನಿಲಯದ ಅಟೆಂಡರ್ ನಾಗರಾಜು ವಿರುದ್ದ ವಸತಿ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪ  ಕೇಳಿ ಬಂದಿದ್ದು ಆರೋಪಿತನ ಮೇಲೆ ಪ್ರಕರಣ ದಾಖಲಾಗಿದೆ.

ವಸತಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬರ ಜೊತೆ ಕೆಟ್ಟ ರೀತಿಯಲ್ಲಿ ನಡೆದುಕೊಂಡ ಆರೋಪ ಕೇಳಿ ಬಂದಿದ್ದು, ಮಕ್ಕಳು ಪೋಷಕರು ಪ್ರತಿಭಟನೆ ನಡೆಸಿದ್ದರು. ನಿನ್ನೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳು ಕಲ್ಯಾಣಾಧಿಕಾರಿ ಹೆಚ್.ಎಸ್.ಬಿಂಧ್ಯಾ ಅವರು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ  ವಸತಿ ಶಾಲೆಯಲ್ಲಿರುವ ಶಿಕ್ಷಕರು ಮತ್ತು ಸಿಬ್ಬಂದಿಗಳ ಸಾಮೂಹಿಕ ವರ್ಗಾವಣೆಗೆ ಸೂಚನೆ ನೀಡಿದರು.

ಇನ್ನು ಗುಂಡ್ಲುಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಮಾವತಿ ದೂರಿನ ಮೇರೆಗೆ  ಗುಂಡ್ಲುಪೇಟೆ ಪೋಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳ ಕಾಯಿದೆ 2012 ರಿಂದ ಮಕ್ಕಳ ರಕ್ಷಣೆ (U/s-8,12) ಸೆಕ್ಷನ್ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನಾಗರಾಜ ತಲೆ ಮರೆಸಿಕೊಂಡಿದ್ದು ನಾಗರಾಜ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.