ಬೆಂಗಳೂರು: ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭಾರತ್ ಮಾತೆ ಪರ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಕುರಿತು ಸಮಗ್ರ ವರದಿ ನೀಡಲು ಬಿಜೆಪಿಯಿಂದ ತಂಡ ರಚನೆ ಮಾಡಲಾಗಿದೆ.
ಮಾಜಿ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ನೇತೃತ್ವದ ಐವರ ತಂಡ ರಚಿಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಆದೇಶ ಹೊರಡಿಸಿದ್ದಾರೆ.
ಸಂಸದ ಪ್ರತಾಪ ಸಿಂಹ, ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕರಾದ ಹರ್ಷವರ್ಧನ್, ಎನ್.ಮಹೇಶ್ರನ್ನು ತಂಡ ಒಳಗೊಂಡಿದೆ.














