ಕಲ್ಬುರ್ಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಘಟಕ ಬಂದ್ ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಸಕ್ಕರೆ ಕಾರ್ಖಾನೆ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ.
ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.
ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನಲೆ ಬೀಗ ಜಡಿಯುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಫ್ಯಾಕ್ಟರಿಗೆ ನೀಡಿರುವ ವಿದ್ಯುತ್, ನೀರಿನ ಸಂರ್ಪಕ ಕಡಿತಗೊಳಿಸುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.