ಮನೆ ಕಾನೂನು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಅಂಜುಮನ್ ಸಂಸ್ಥೆ ಸಲ್ಲಿಸಿದ ವಜಾ

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಅಂಜುಮನ್ ಸಂಸ್ಥೆ ಸಲ್ಲಿಸಿದ ವಜಾ

0

ಧಾರವಾಡ : ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿ ಕಿತ್ತೂರು ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋಟ್೯ ವಜಾಗೊಳಿಸಿದೆ.

ಗಣೇಶೋತ್ಸವ ಕುರಿತು ಮಹಾನಗರ ಪಾಲಿಕೆ ಕೈಗೊಂಡ ನಿರ್ಣಯವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ ಇಸ್ಲಾಂ ಸಂಸ್ಥೆಯವರು ಧಾರವಾಡ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ ಸಚಿನ‌ ಮಗದುಮ್ಮ‌ಅವರಿದ್ದ ಏಕಸದಸ್ಯ ಪೀಠವು ಮೇಲ್ಮನವಿ ಅರ್ಜಿ ತಿರಸ್ಕರಿಸಿ ತೀರ್ಪು ನೀಡಿದೆ. ಈ ಮೂಲಕ ಎರಡನೆ ವರ್ಷವು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಕೂಲ ಆದಂತಾಗಿದೆ.

ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಇದೀಗ ಮಹಾನಗರ ಪಾಲಿಕೆ ಠರಾವಿಗೆ ಒಪ್ಪಿಗೆ ಸಿಕ್ಕಂತಾಗಿದೆ.

ಗಣೇಶ ಪ್ರತಿಷ್ಠಾಪನೆಗೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ,ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ,ಮಾಜಿ ಮೇಯರ್ ಈರೇಶ ಅಂಚಟಗೇರಿ ಸೇರಿದಂತೆ ಅನೇಕರು ಕಳೆದ ಎರಡು ದಿನದಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದ್ದರು.

ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕಿರಿಸಿದ ಹಿನ್ನೆಲೆಯಲ್ಲಿ ಅವಕಾಶ ಕೋರಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ವಿಜಯೋತ್ಸವ ಆಚರಿಸಿದರು.