ಮನೆ ರಾಜ್ಯ ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ..!

ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ..!

0

ಮಂಗಳೂರು : ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿಯಾಗಿದೆ.

ಸುಗಂಧ ದ್ರವ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದ್ದು, ಸಂಪೂರ್ಣ ಘಟಕವೇ ಧಗಧಗನೆ ಉರಿದು ಕರಕಲಾಗಿದೆ. ಈ ಸ್ಥಳಕ್ಕೆ ಎಂಸಿಎಫ್, ಎನ್‌ಎಂಪಿಎ ಹಾಗೂ ಕದ್ರಿ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.

ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಸದ್ಯಕ್ಕೆ ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡದ ಕಾರಣ ಪತ್ತೆಹಚ್ಚಲು ತನಿಖೆಯನ್ನು ಆರಂಭಿಸಿದ್ದಾರೆ.