ಮನೆ ಅಂತಾರಾಷ್ಟ್ರೀಯ ಗರ್ಭಪಾತದ ಹಕ್ಕು ರದ್ದುಗೊಳಿಸಿದ ಅಮೇರಿಕ

ಗರ್ಭಪಾತದ ಹಕ್ಕು ರದ್ದುಗೊಳಿಸಿದ ಅಮೇರಿಕ

0

ವಾಷಿಂಗ್ಟನ್ : ಅಮೇರಿಕ ದೇಶದಲ್ಲಿ ಐವತ್ತು ವರ್ಷಗಳಿಂದ ಜಾರಿಯಲ್ಲಿದ್ದ ಗರ್ಭಪಾತದ ಹಕ್ಕನ್ನು ಅಮೆರಿಕದ ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್  “ಇಂದು ಅಮೆರಿಕಕ್ಕೆ ಬಹಳ ದುಃಖದ ದಿನ, ಮಹಿಳೆಯರ ಆರೋಗ್ಯ ಮತ್ತು ಜೀವನ ಅಪಾಯದಲ್ಲಿದೆ” ಎಂದು ಹೇಳಿದ್ದಾರೆ.

ರೋ ಕೇಸಿ ಪ್ರಕರಣದ ತೀರ್ಪನ್ನು ನಾವು ರದ್ದುಗೊಳಿಸುತ್ತೇವೆ. ಗರ್ಭಕೋಶಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವು ಚುನಾಯಿತ ಪ್ರತಿನಿಧಿಗಳು ಮತ್ತು ಇರುತ್ತದೆಯೆಂದು ನ್ಯಾಯಾಲಯ ಹೇಳಿದೆ.

ಈ ತೀರ್ಪಿನ ಕುರಿತು ಒಂದಷ್ಟು ಜನ ಸಮ್ಮತಿ ವ್ಯಕ್ತಪಡಿಸಿದರೆ ಮತ್ತೊಂದಷ್ಟು ಜನ ವಿರೋಧ ವ್ಯಕ್ತಪಡಿಸಿದ್ದಾರೆ.

ಅಮೆರಿಕದಲ್ಲಿ 1973 ರಲ್ಲಿ ರೋಯ್ ವಿ ವೇಡ್ ಪ್ರಕರಣದಲ್ಲಿ ಮಹಿಳೆಯರಿಗೆ ಗರ್ಭಪಾತ ಮಾಡುವ ಸಾಂವಿಧಾನಿಕ ಹಕ್ಕನ್ನು ನೀಡುವ ಮಹತ್ವದ ತೀರ್ಪು ನೀಡಲಾಗಿತ್ತು. ಅಂದಿನಿಂದ ಅಲ್ಲಿ ಗರ್ಭಪಾತವನ್ನು ಕಾನೂನು ಬದ್ಧಗೊಳಿಸಲಾಗಿತ್ತು.

ಆದರೆ, ಅನಿಯಂತ್ರಿತ ಗರ್ಭಪಾತಗಳು ಮತ್ತು ಮಹಿಳೆಯರ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಉಂಟು ಮಾಡಿತ್ತು. ಕಳೆದ ಕೆಲವು ವರ್ಷಗಳಿಂದ ಅಮೆರಿಕದ ಕೆಲವು ಭಾಗಗಳಲ್ಲಿಕೆಲವು ಸಂಘಟನೆಗಳು ಹೋರಾಡುತ್ತಿದ್ದು, ಗರ್ಭಪಾತದ ಹಕ್ಕನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದವು.