ಮನೆ ರಾಜಕೀಯ ಈಶ್ವರಪ್ಪಗೆ ಅಮಿತ್ ಶಾ ಕರೆ: ದೆಹಲಿಗೆ ಬರುವಂತೆ ಮನವಿ

ಈಶ್ವರಪ್ಪಗೆ ಅಮಿತ್ ಶಾ ಕರೆ: ದೆಹಲಿಗೆ ಬರುವಂತೆ ಮನವಿ

0

ಬೆಂಗಳೂರು: ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ  ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.

Join Our Whatsapp Group

ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆಪ್ತರ ಜತೆ ಮಾಹಿತಿ ಹಂಚಿಕೊಂಡಿರುವ ಈಶ್ವರಪ್ಪ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ಆದರೆ, ಸ್ಪರ್ಧೆಯ ವಿಚಾರವಾಗಿ ನಿಲುವಿಗೆ ಬದ್ಧ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ.

ಅಮಿತ್ ಶಾ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೆಎಸ್ ಈಶ್ವರಪ್ಪ, ಕೇಂದ್ರ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ. ಅವರ ಕೋರಿಕೆಯ ಮೇರೆಗೆ ದೆಹಲಿಗೆ ಹೋಗುತ್ತೇನೆ. ಆದರೆ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧಾರ ಮಾಡಿದ್ದೇನೆ. ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಈಶ್ವರಪ್ಪ ಪುನರುಚ್ಚರಿಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಸದ್ಯ ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜತೆ ಸಭೆ ನಡೆಸಿದ್ದಾರೆ. ಇದೇ ವೇಳೆ ಅವರು ಈಶ್ವರಪ್ಪಗೆ ದೂರವಾಣಿ ಕರೆ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯಾದ ಬೆನ್ನಲ್ಲೇ ಬಿಎಸ್​ ಯಡಿಯೂರಪ್ಪ, ಬಿವೈ ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿರುವ ಈಶ್ವರಪ್ಪ, ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಶತಃಸಿದ್ಧ ಎಂದು ಘೋಷಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಕುಟುಂಬದ ಹಿಡಿತದಿಂದ ಪಕ್ಷ ಮುಕ್ತವಾಗುವ ವರೆಗೆ ವಿರಮಿಸುವುದಿಲ್ಲ ಎಂದೂ ಹೇಳಿದ್ದಾರೆ.

ಹಿಂದಿನ ಲೇಖನನ್ಯಾಯಮೂರ್ತಿ ಸಂತೋಷ್ ಹೆಗಡೆ ವರದಿ ಬಳಿಕ ಜನಾರ್ಧನರೆಡ್ಡಿ ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆ ಮಾಡಿದ್ದು: ಸಿದ್ದರಾಮಯ್ಯ
ಮುಂದಿನ ಲೇಖನಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ