ಮನೆ ರಾಷ್ಟ್ರೀಯ ಛತ್ತೀಸ್‌ ಗಢದ ನಕ್ಸಲ್ ಪೀಡಿತ ಪ್ರದೇಶಗಳಿಗೆ ಅಮಿತ್ ಶಾ ಮೂರು ದಿನಗಳ ಭೇಟಿ

ಛತ್ತೀಸ್‌ ಗಢದ ನಕ್ಸಲ್ ಪೀಡಿತ ಪ್ರದೇಶಗಳಿಗೆ ಅಮಿತ್ ಶಾ ಮೂರು ದಿನಗಳ ಭೇಟಿ

0

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಿಂದ ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶಗಳಿಗೆ ಮೂರು ದಿನಗಳ ಭೇಟಿ ನೀಡಲಿದ್ದಾರೆ.

Join Our Whatsapp Group

ಭೇಟಿ ವೇಳೆ ರಾಜ್ಯದಲ್ಲಿನ ಕಾನೂನು-ಸುವ್ಯವಸ್ಥೆ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಮತ್ತು ಶರಣಾದ ನಕ್ಸಲರು ಮತ್ತು ಸ್ಥಳೀಯರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ಗುರುವಾರ(ಡಿ12) ತಿಳಿಸಿವೆ.

 ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಅವರು ಇಲ್ಲಿ ಕಳೆದ ವಾರ ಶಾ ಅವರನ್ನು ಭೇಟಿ ಮಾಡಿದ್ದರು. ಬಸ್ತಾರ್ ಮತ್ತು ಕೊಂಡಗಾಂವ್ ಜಿಲ್ಲೆಗಳು ನಕ್ಸಲರಿಂದ ಸಂಪೂರ್ಣವಾಗಿ ಮುಕ್ತವಾಗಿವೆ ಮತ್ತು ಇತರ ಪ್ರದೇಶಗಳಿಂದ ನಕ್ಸಲರನ್ನು ಮುಕ್ತ ಮಾಡಲು ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ತಿಳಿಸಿದ್ದರು.

ಶಾ ಅವರು ಭೇಟಿಯ ಸಂದರ್ಭದಲ್ಲಿ ಭದ್ರತೆ ಮತ್ತು ಶಾಂತಿಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಯ್‌ಪುರದಲ್ಲಿ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಛತ್ತೀಸ್‌ಗಢ ಪೊಲೀಸರಿಗೆ ರಾಷ್ಟ್ರಪತಿಗಳ ಕಲರ್ ಅವಾರ್ಡ್ ಪ್ರದಾನ ಮಾಡಲಿದ್ದಾರೆ. ಜಗದಲ್ಪುರದಲ್ಲಿ ಶರಣಾದ ನಕ್ಸಲರು, ಸ್ಥಳೀಯರು ಮತ್ತು ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.