ಮನೆ ರಾಜಕೀಯ ನಾಳೆ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ

ನಾಳೆ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ

0

ಬೆಂಗಳೂರು: ‘ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಮಾ. 31ಕ್ಕೆ)  ರಾತ್ರಿ 10.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಮರುದಿನ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಾಹ್ನ 2.10 ಕ್ಕೆ ಮುದ್ದೇನಹಳ್ಳಿಯಲ್ಲಿ ವೈದ್ಯಕೀಯ ಕಾಲೇಜಿನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಹಕಾರ ಇಲಾಖೆಯ ಸಹಕಾರ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ನಂದಿನಿ ಕ್ಷೀರಾಭಿವೃದ್ದಿ ಬ್ಯಾಂಕ್ ಲೋಗೊ ಬಿಡುಗಡೆ ಮಾಡಲಿದ್ದಾರೆ‌’ ಎಂದರು.

‘ಸಂಜೆ 6 ಗಂಟೆಗೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದು, ಪಕ್ಷದ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ’ . ‘ಯಶಸ್ವಿನಿ ಯೋಜನೆ ಮತ್ತೆ ಆರಂಭಿಸುವಂತೆ ಬೇಡಿಕೆ ಇತ್ತು. ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಗೆ ₹ 300 ಕೋಟಿ ಮೀಸಲಿಟ್ಟಿದೆ. ಅದಕ್ಕೂ ಕೂಡ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ’ ಎಂದರು.

ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ: ‘ಇದುವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಂಡಿದ್ದೇವೆ.‌ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ’ ಎಂದರು.

ಹಲಾಲ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಇಂಥ ಸನ್ನಿವೇಶ ಈಗಷ್ಟೇ ಆರಂಭವಾಗಿದೆ. ಇದರ ಸಮಗ್ರತೆಯನ್ನು ಗಮನಿಸಬೇಕಾಗುತ್ತದೆ. ಕೆಲವು ನಿಯಮಗಳು, ಆಚರಣೆಗಳು ಮೊದಲಿನಿಂದಲೂ ಇವೆ. ಅದರಂತೆ ನಡೆದುಕೊಂಡು ಹೋಗುತ್ತಿದೆ. ಧಾರ್ಮಿಕ ದತ್ತಿ ಕಾಯ್ದೆಯ ನಿಯಮದ ಬಗ್ಗೆ ಗಂಭೀರ ಆಕ್ಷೇಪಗಳು ಎದ್ದಿವೆ. ಅದರ ಬಗ್ಗೆ ಅವಲೋಕನ ಮಾಡುತ್ತೇವೆ’ ಎಂದರು.

ಹಿಂದಿನ ಲೇಖನಟಿಪ್ಪು ಸ್ವಾತಂತ್ರ್ಯ ಯೋಧ ಎನ್ನುವುದೇ ಉತ್ಪ್ರೇಕ್ಷೆ: ಬಿಜೆಪಿ ಟ್ವೀಟ್
ಮುಂದಿನ ಲೇಖನಬಹುಮತ ಕಳೆದುಕೊಂಡ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್