ಹುಬ್ಬಳ್ಳಿ: ನಾಳೆ ಅಮಿತ್ ಶಾ ನಗರಕ್ಕೆ ಬಂದು ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಂತರ ಶಾ ಭಾರತದ ಅತ್ಯಂತ ಜನಪ್ರಿಯ ನಾಯಕರು ಮತ್ತು ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಿದ ಜೋಶಿ ಅವರ ಆಗಮನಕ್ಕಾಗಿ ಕ್ಷೇತ್ರದ ಕಾರ್ಯಕರ್ತರು ಮತ್ತು ಜನ ಕಾತುರದಿಂದ ಕಾಯುತ್ತಿದ್ದಾರೆ ಎಂದರು.
ಪ್ರಜ್ವಲ್ ರೇವಣ್ಣನ ಪ್ರಕರಣ ಬಿಜೆಪಿ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಲ್ಲ, ಜೆಡಿಎಸ್ ಒಂದು ಸ್ವತಂತ್ರ ಪಾರ್ಟಿ, ಪ್ರಜ್ವಲ್ ಮಾಜಿ ಪ್ರಧಾನಿಯೊಬ್ಬರ ಮೊಮ್ಮಗನಾಗಿರುವುದರಿಂದ ಪ್ರಕರಣ ಹೆಚ್ಚು ಸಂವೇದನಾಶೀಲವಾಗಿದೆ ಎಂದು ಜೋಶಿ ಹೇಳಿದರು.
ಪ್ರಕರಣದ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಅಗೇ ಆಗುತ್ತದೆ, ಖುದ್ದು ಕುಮಾರಾಸ್ವಾಮಿಯವರೇ, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅಂತ ಹೇಳಿದ್ದಾರೆ. ಪ್ರಜ್ವಲ್ ವಿದೇಶಕ್ಕೆ ಹಾರಿ ಹೋಗಿದ್ದಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೇಳಿದರು.