ಮನೆ ರಾಷ್ಟ್ರೀಯ 5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ ಅಮಿತ್ ಶಾ

5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ ಅಮಿತ್ ಶಾ

0

ಗಾಂಧಿ ನಗರ: ಅಮಿತ್ ಶಾ 5 ಲಕ್ಷಗಳ ಮತಗಳ ಅಂತರದಲ್ಲಿ ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಗೆಲುವು ಸಾಧಿಸಿದ್ದಾರೆ.

Join Our Whatsapp Group

ಕಾಂಗ್ರೆಸ್​​​​​ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್​​​ ಶಾ ಮುಂದೆ ಸ್ಪರ್ಧಿಸಿದರು. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಈ ಕ್ಷೇತ್ರದಿಂದ ಸ್ವರ್ಧಿಸಿದರು. ಇದಕ್ಕೂ ಮೊದಲು 1996ರಲ್ಲಿ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕೂಡ ಈ ಕ್ಷೇತ್ರದಿಂದ ಸ್ವರ್ಧಿಸಿ ಗೆಲುವು ಸಾಧಿಸಿದರು.

ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಿತು. ಬಿಜೆಪಿ ಇಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿಕೊಂಡು ಬಂದಿದೆ. ದೇಶದ ಬೇರೆ ಬೇರೆ ಕಡೆ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ಇದರ ಜತೆಗೆ ಕಾಂಗ್ರೆಸ್​​ ಮೈತ್ರಿಕೂಟ ಇಂಡಿಯಾ ಕೂಡ ಭಾರೀ ಪೈಪೋಟಿಯನ್ನು ನೀಡುತ್ತಿದೆ. ಗುಜರಾತ್‌ನ ಗಾಂಧಿನಗರ ನಗರ ಕ್ಷೇತ್ರದಿಂದ ಅಮಿತ್​​ ಶಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷ ನಾಯಕರು ಈ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರು.

ಗುಜರಾತ್‌ನಲ್ಲಿ ಬಿಜೆಪಿ ಸುಮಾರು 25-26 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ.