ಮನೆ ರಾಜ್ಯ ಸ್ವಾತಂತ್ರ್ಯದ ಅಮೃತ ಮಹೋತ್ಸವ: ಮನೆಗಳಲ್ಲಿ ತಿರಂಗಾ ಹಾರಿಸಿದ ಸಚಿವರು

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಮನೆಗಳಲ್ಲಿ ತಿರಂಗಾ ಹಾರಿಸಿದ ಸಚಿವರು

0

ಬೆಂಗಳೂರು(Bengaluru): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ರಾಜ್ಯದ ಸಚಿವರು ಶಾಸಕರು ತಮ್ಮ ಮನೆಗಳಲ್ಲಿ ತಿರಂಗಾ ಹಾರಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ಮಾಡಿದರು. ಕಂದಾಯ ಸಚಿವ ಆರ್.ಅಶೋಕ್ ಅವರು ಜಾಲಹಳ್ಳಿಯ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ, ಸಿಹಿ ವಿತರಿಸಿದರು.

ಅದೇ ರೀತಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳರವರು ಶನಿವಾರ ಮುಂಜಾನೆ 9:15 ಕ್ಕೆ ತಮ್ಮ ಅಧಿಕೃತ ನಿವಾಸ ನಂಬರ್ 2 ಕ್ರಸೆಂಟ್ ರಸ್ತೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವರು. ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿಯ ನಮ್ಮ ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಧ್ವಜಾರೋಹಣ ಮಾಡಿದರು.

ಸಚಿವೆ ಶಶಿಕಲಾ ಜೊಲ್ಲೆ ಯಕ್ಸಂಬಾ ಪಟ್ಟಣದ ನಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಟ್ವಿಟ್ಟರ್ ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಮನೆ – ಮನದಲ್ಲಿ ರಾರಾಜಿಸಲಿ ನಮ್ಮ ಹೆಮ್ಮೆಯ ರಾಷ್ಟ್ರಧ್ವಜ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯವರೆಗೆ ಎಲ್ಲರೂ ತಮ್ಮ ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಒಂದು ದೇಶ ಭಕ್ತಿಯ ಅಭಿಯಾನದಲ್ಲಿ ಭಾಗವಹಿಸಬೇಕಾಗಿ ವಿನಂತಿ ಮಾಡಿದ್ದಾರೆ.