ಉತ್ತರ ಕನ್ನಡ: ಮೊಬೈಲ್ ಚಾರ್ಜರ್ ನಿಂದ ಶಾಕ್ ಹೊಡೆದು 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ನಡೆದಿದೆ.
ಪೋಷಕರ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಯ 8 ತಿಂಗಳ ಮಗು ಸಾನಿಧ್ಯ ವಿದ್ಯುತ್ ಶಾಕ್ ಗೆ ಬಲಿಯಾಗಿದೆ.
ಮೊಬೈಲ್ ಚಾರ್ಜ್’ಗೆ ಹಾಕಿ ಪೋಷಕರು ಆಫ್ ಮಾಡದೇ ಇಟ್ಟಿದ್ದರು. ಈ ವೇಳೆ ಆನ್ ಇದ್ದ ಚಾರ್ಜರ್ ಅನ್ನು ಮಗು ಬಾಯಲ್ಲಿಟ್ಟುಕೊಂಡಿದ್ದು ಈ ಸಮಯದಲ್ಲಿ ಶಾಕ್ ನಿಂದ ಮಗು ಕೊನೆಯುಸಿರೆಳದಿದೆ.
ಮಗುವಿನ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ಕುರಿತು ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.