ಬೆಂಗಳೂರು: ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರ ಹೆಚ್ಚುವರಿಯಾಗಿ 1.14 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲು ತೀರ್ಮಾನ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ರೈತರ ಬೇಡಿಕೆಯ ಮೇರೆಗೆ ಈಗಾಗಲೇ 2.1 ಲಕ್ಷ ಟನ್ ರಾಗಿ ಖರೀದಿ ಮಾಡಿರುವ ಜೊತೆಗೆ ಹೆಚ್ಚುವರಿಯಾಗಿ ಸರ್ಕಾರ ಖರೀದಿ ಮಾಡುತ್ತಿದೆ. ಇದಕ್ಕೆ ಒಟ್ಟು 487 ಕೋಟಿ ರೂ.ಗಳ ವೆಚ್ಚವಾಗಲಿದೆ ಎಂದರು.