ಮನೆ ಹವಮಾನ ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಣೆ: ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಣೆ: ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

0

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರಿ ಮಳೆಯಾಗಲಿದ್ದು, ಹವಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

Join Our Whatsapp Group

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಮಂಗಳೂರು, ಕೊಲ್ಲೂರು, ಶಹಪುರ, ಕಾರವಾರ, ಶಿರಾಲಿ, ಜಾನ್ಮನೆ, ಕುಂದಾಪುರ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಉಡುಪಿ, ಕುರ್ಡಿ, ಮಾನ್ವಿ, ದಾವಣಗೆರೆ, ಯುಗಟಿ, ಕೊಟ್ಟಿಗೆಹಾರ, ಕೂಡ್ಲಿಗಿ, ಕೊಟ್ಟೂರು, ಮಂಕಿ, ಕುಮಟಾ, ಗೋಕರ್ಣ, ಬೇಲಿಕೇರಿ, ಅಂಕೋಲಾ, ಸಿದ್ದಾಪುರ, ಪುತ್ತೂರು, ಸುಬ್ರಹ್ಮಣ್ಯ, ಉಪ್ಪಿನಂಗಡಿ, ಭಾಲ್ಕಿ, ಹೊಸಕೋಟೆ, ಚನ್ನಗಿರಿ, ಭಾಗಮಂಡಲ, ಕಮ್ಮರಡಿ, ಚನ್ನಪಟ್ಟಣ, ಹರಪನಹಳ್ಳಿ, ಗೇರುಸೊಪ್ಪ, ಕ್ಯಾಸಲ್​ರಾಕ್, ಶಿರಹಟ್ಟಿ, ಚಿತ್ತಾಪುರ, ಚಿಂಚೋಳಿ, ಸೇಡಂ, ನಾಪೋಕ್ಲು, ವಿರಾಜಪೇಟೆ, ಕಳಸ, ಕಡೂರು, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್’​ಎಎಲ್’​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್ ​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹದೇವಪುರ ವಲಯದ ರಾಮಮೂರ್ತಿ ನಗರದಲ್ಲಿ 10 ಮಿಮೀ ಮಳೆಯಾಗಿದೆ. ರಾಜ್ಯದಲ್ಲಿ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ 71.5 ಮಿಮೀ ಮಳೆಯಾಗಿದ್ದು, ರಾಜ್ಯದಲ್ಲಿ 24 ಗಂಟೆಗಳಲ್ಲಿ ಅತಿ ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಕಳೆದ 4 ಗಂಟೆಗಳಲ್ಲಿ ತುಮಕೂರು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ.

ಹಿಂದಿನ ಲೇಖನಕೇಂದ್ರ ಲೋಕಸೇವಾ ಆಯೋಗದಿಂದ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಮುಂದಿನ ಲೇಖನಖ್ಯಾತ ಖಳನಟ ಕಝಾನ್​ ಖಾನ್​ ಹೃದಯಾಘಾತದಿಂದ ನಿಧನ