ಮೈಸೂರು(Mysuru): ಸೇವೆ ಕಾಯಂ ಎಂಬಿವೇ ಮೊದಲಾದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರು ಜುಲೈ 1 ರಿಂದ ಕೆಲಸ ಕಾರ್ಯ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಚಳವಳಿ ನವ ನಿರ್ಮಾಣ ವೇದಿಕೆ ತಿಳಿಸಿದೆ.
ಈ ಕುರಿತು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಹರಿಹರ ಆನಂದಸ್ವಾಮಿ, ನಾಗರೀಕರ ಪ್ರತಿನಿತ್ಯದ ಕೊಳೆಗಳನ್ನು ಪೌರ ಕಾರ್ಮಿಕರು ಸ್ವಚ್ಛಗೊಳಿಸುತ್ತಿದ್ದರೂ ಇವರನ್ನು ಅತ್ಯಂತ ತುಚ್ಛವಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಇವರ ಸೇವೆ ಕಾಯಂಗೊಳಿಸಿಲ್ಲ. ತಾರತಮ್ಯ ತೋರಲಾಗುತ್ತಿದೆ. ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಎಲ್ಲ ಚಳವಳಿಗಳು ಇವರ ಅನಿರ್ದಿಷ್ಟಾವಧಿ ಮುಷ್ಕರವನ್ನು ಬೆಂಬಲಿಸಬೇಕೆಂದು ಕೋರಿದರು.
ವೇದಿಕೆಯ ಸೋಮಯ್ಯ, ದರ್ಶನ್, ಸತೀಶ್, ಇನ್ನಿತರರು ಹಾಜರಿದ್ದರು.