ಮನೆ ತಂತ್ರಜ್ಞಾನ ವಾಟ್ಸ್​ ಆ್ಯಪ್ ​ನಲ್ಲಿ ಬರುತ್ತಿದೆ ಚಾಟ್ ಫಿಲ್ಟರ್ ಎಂಬ ಆಯ್ಕೆ

ವಾಟ್ಸ್​ ಆ್ಯಪ್ ​ನಲ್ಲಿ ಬರುತ್ತಿದೆ ಚಾಟ್ ಫಿಲ್ಟರ್ ಎಂಬ ಆಯ್ಕೆ

0

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ ​ಆ್ಯಪ್​ ನಲ್ಲಿ ಸಾಲು ಸಾಲು ಅಪ್ಡೇಟ್ ​ಗಳು ಬರಲು ತಯಾರಾಗಿದೆ. ಹೀಗಿರುವಾಗ ಇಂದು ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸದ್ಯದಲ್ಲೇ ವಾಟ್ಸ್ ​ಆ್ಯಪ್​ ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್ ​ನಲ್ಲಿ ಮಹತ್ವದ ಬದಲಾವಣೆ ತರಲಿದೆ.

ವಾಟ್ಸ್​ ಆ್ಯಪ್ ಅಪ್‌ಡೇಟ್‌ ಗಳ ಟ್ರ್ಯಾಕರ್, WabetaInfo ನ ವರದಿಯ ಪ್ರಕಾರ, ಮೆಟಾ-ಮಾಲೀಕತ್ವದ ಇನ್‌ ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಶನ್ ಬಳಕೆದಾರರಿಗೆ ಚಾಟ್ ಪಟ್ಟಿಯನ್ನು ಫಿಲ್ಟರ್ ಎಂಬ ಹೊಸ ವೈಶಿಷ್ಟ್ಯವನ್ನು ನೀಡಲು ಮುಂದಾಗಿದೆ. ಸದ್ಯ ಈ ಫೀಚರ್ ಅಭಿವೃದ್ದಿ ಹಂತದಲ್ಲಿದೆ ಎಂದು ಹೇಳಿದೆ.

ವಾಟ್ಸ್​ಆ್ಯಪ್ ಬೀಟಾ 2.23.14.17 ಅಪ್ಡೇಟ್ ​ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

ಮಾಹಿತಿಯ ಪ್ರಕಾರ, ಫಿಲ್ಟರ್ ​ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್​ ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್​ ಆ್ಯಪ್​ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.

ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್‌ ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್ ​ಗಳಿಗೆ ಇದು ಅನ್ವಯ ಆಗುವುದಿಲ್ಲ.

ಹಿಂದಿನ ಲೇಖನಭಾರತದ ಎದುರು ಶ್ರೀಲಂಕಾ ಗೆ 41 ರನ್ ಗಳ ಸೋಲು: ಫೈನಲ್ ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ 
ಮುಂದಿನ ಲೇಖನಚಿಕ್ಕಮಗಳೂರು: ಸರಣಿ ಅಪಘಾತದಲ್ಲಿ ದಂಪತಿ ಸಾವು, ಮಗುವಿನ ಸ್ಥಿತಿ ಗಂಭೀರ