ಮನೆ ರಾಜ್ಯ ಸಂಪೂರ್ಣ ಫಲಿತಾಂಶ ಬಂದ ಬಳಿಕ ವಿಶ್ಲೇಷಣೆ: ಸಿಎಂ ಬೊಮ್ಮಾಯಿ

ಸಂಪೂರ್ಣ ಫಲಿತಾಂಶ ಬಂದ ಬಳಿಕ ವಿಶ್ಲೇಷಣೆ: ಸಿಎಂ ಬೊಮ್ಮಾಯಿ

0

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಎನೆಲ್ಲ ಕೊರತೆಗಳಾಗಿವೆ ಎಂಬುದರ ಬಗ್ಗೆ ಗಮನಹರಿಸಲಾಗುತ್ತದೆ. ಸಂಪೂರ್ಣ ಫಲಿತಾಂಶ ಬಂದ ನಂತರ ಈ ಬಗ್ಗೆ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದ್ದಾರೆ.

Join Our Whatsapp Group

ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತದಾರ ನಿರ್ಧಾರಕ್ಕೆ ತಲೆ ಬಾಗಿದ್ದಾರೆ.

 ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ನಾವು ಈ ಬಗ್ಗೆ ವಿಶ್ಲೇಷಿಸುವುದರ ಜೊತೆಗೆ, ವಿವಿಧ ಹಂತಗಳಲ್ಲಿ ಯಾವ ಕೊರತೆಗಳಾಗಿವೆ ಎಂಬುದರ ಬಗ್ಗೆ ಚರ್ಚಿಸಲಾಗುವುದು. ಈ ಫಲಿತಾಂಶವನ್ನು ಒಪ್ಪಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪುಟಿದೆದ್ದು ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವಾದ ಶಿಗ್ಗಾಂವಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಪಠಾಣ್​ ಯಾಸೀರ್​ ಅಹ್ಮದ್​ ಖಾನ್​ ವಿರುದ್ಧ ಸರಿಸುಮಾರು 28 ಸಾವಿರ ಮತಗಳ ಅಂತರದಿಂದ ಹಾಲಿ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ.