ಮನೆ ಉದ್ಯೋಗ ಅಗ್ನಿಪಥ್ ಪ್ರತಿಭಟನೆ: ಅಗ್ನಿವೀರರಿಗೆ ಉದ್ಯೋಗದ ಆಫರ್ ನೀಡಿದ ಆನಂದ್ ಮಹೀಂದ್ರ

ಅಗ್ನಿಪಥ್ ಪ್ರತಿಭಟನೆ: ಅಗ್ನಿವೀರರಿಗೆ ಉದ್ಯೋಗದ ಆಫರ್ ನೀಡಿದ ಆನಂದ್ ಮಹೀಂದ್ರ

0

ಬೆಂಗಳೂರು(Bengaluru): ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಖ್ಯಾತ ಉದ್ಯಮಿ ಹಾಗೂ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅಗ್ನಿವೀರರಿಗೆ ತಮ್ಮ ಕಂಪನಿಗಳಲ್ಲಿ ಉದ್ಯೋಗ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಗ್ನಿಪಥ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬೇಸರ ಮೂಡಿಸಿದೆ. ಮಹೀಂದ್ರಾ ಸಮೂಹ ಸಂಸ್ಥೆಗಳಲ್ಲಿ, ಅರ್ಹ, ಕೌಶಲ ಹೊಂದಿರುವ ಮತ್ತು ಪರಿಣತ ಅಗ್ನಿವೀರರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ. ಇದರಿಂದ, ನಮಗೆ ಸಮರ್ಥ ಅಭ್ಯರ್ಥಿ ದೊರೆಯಲಿದೆ ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ.

ಪೂರೈಕೆ, ಸರಪಳಿ ನಿರ್ವಹಣೆ ಕೆಲಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಬಿಹಾರದಲ್ಲಿ ಪ್ರತಿಭಟನಾಕಾರರು ಅನೇಕ ರೈಲುಗಳಿಗೆ ಬೆಂಕಿ ಹಚ್ಚಿದ್ದಾರೆ. ಬಿಹಾರ ಒಂದರಲ್ಲೇ 700 ಕೋಟಿ ರೈಲ್ವೆ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ, ಅಗ್ನಿಪಥ್ ಯೋಜನೆ ವಿರೋಧಿಸಿ ಸೇನೆಯಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿರುವ ಅಭ್ಯರ್ಥಿಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಪ್ರತಿಪಕ್ಷಗಳೂ ಸಹ ಭಾರತ್ ಬಂದ್‌ಗೆ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿವೆ.

ಬಂದ್​ ಹಿನ್ನೆಲೆ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಹಾಗೂ ಹಿಂಸಾಚಾರ ಎಸಗುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಪೊಲೀಸ್​ ಇಲಾಖೆ ತಿಳಿಸಿದೆ.