ಮನೆ ರಾಜ್ಯ ಆನೇಕಲ್: ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ

ಆನೇಕಲ್: ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ

0

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ನಡೆದ ಹೃದಯವಿದ್ರಾವಕ ಘಟನೆ ಜನರಲ್ಲಿ ಆತಂಕ ಸೃಷ್ಟಿಸಿದೆ. ಸುಮಾರು ಹತ್ತು ವರ್ಷದ ಬಾಲಕಿ ಶವವಿರುವ ಸೂಟ್‌ಕೇಸ್‌ ಪತ್ತೆಯಾಗಿದ್ದು, ಇದನ್ನು ಚಲಿಸುತ್ತಿದ್ದ ರೈಲಿನಿಂದ ಎಸೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸ್ಥಳೀಯರು ಬ್ರಿಡ್ಜ್ ಬಳಿ ಅನುಮಾನಾಸ್ಪದ ಸೂಟ್‌ಕೇಸ್ ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರ ಆಗಮನದ ಬಳಿಕ ಸೂಟ್‌ಕೇಸ್ ಪರಿಶೀಲನೆ ನಡೆಯಲಿದೆ. ಸುತ್ತಮುತ್ತದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.