ಮನೆ ರಾಜ್ಯ ನ.22 ರಂದು ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋಗೆ ಕರೆ

ನ.22 ರಂದು ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋಗೆ ಕರೆ

0

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ನಾಳೆ( ನ.22)ಬೆಳಗ್ಗೆ 10 ಗಂಟೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಿ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಬರೋಬ್ಬರಿ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಇದ್ದಾರೆ. ಕೊರೊನಾ ಸಮಯದಲ್ಲಿ ಜೀವದ ಹಂಗು ತೊರೆದು ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದಾರೆ. ಈ ಸಮಯದಲ್ಲಿ ಹಲವು ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಮರಣ ಹೊಂದಿದ್ದಾರೆ. ಇದರಿಂದ ಅನೇಕ‌ ಕುಟುಂಬಗಳು ಬೀದಿ ಪಾಲಾಗಿವೆ. ಸರ್ಕಾರದಿಂದ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರಿಗೆ ಗೌರವ ಧನ ಹೆಸರಲ್ಲಿ ಶೋಷಣೆ ಮಾಡುತ್ತಿದೆ. ಇವರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಬೇಡಿಕೆಗಳು ಏನು?

ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು

ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಬೇಕು

ಎಲ್ಲಾ‌ ಮಿನಿ ಅಂಗನವಾಡಿ ಕೇಂದ್ರಗಳನ್ನ ಮೇಲ್ವರ್ಜೆಗೆ ಏರಿಸಬೇಕು

ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಗ್ರಾಜ್ಯುಟಿ ಹಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು ₹15 ಸಾವಿರ, ₹10 ಸಾವಿರ ಹೆಚ್ಚಿಸಲಾಗುವುದೆಂದು ಚುನಾವಣಾ ಪೂರ್ವದಲ್ಲಿ ಬೆಳಗಾವಿಯ ಖಾನಪುರದಲ್ಲಿ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭರವಸೆ ಕೊಟ್ಟಿದ್ದರು. ಕಾಂಗ್ರೆಸ್ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ‌‌ ಮಾಡಲು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒತ್ತಾಯಿಸಿದ್ದಾರೆ.

ಹಿಂದಿನ ಲೇಖನಬೆಂಗಳೂರು: ಉದ್ಯಮಿಗಳ ಮನೆ, ಕಚೇರಿ ಮೇಲೆ ಐಟಿ ದಾಳಿ
ಮುಂದಿನ ಲೇಖನಜಗಳ ಬಿಡಿಸಲು ಬಂದ ಪೊಲೀಸರ 112 ವಾಹನದಲ್ಲಿ ವ್ಯಕ್ತಿ ಪರಾರಿ:  ಆರೋಪಿ ವಶಕ್ಕೆ