ಮನೆ ರಾಷ್ಟ್ರೀಯ ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ಚಂದ್ರಬಾಬು ನಾಯ್ಡು ಆರೋಪ

ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ಚಂದ್ರಬಾಬು ನಾಯ್ಡು ಆರೋಪ

0

ಆಂಧ್ರಪ್ರದೇಶ: ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ಲಡ್ಡೂಗಳನ್ನು ತಯಾರಿಸಲು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷ ತಳ್ಳಿಹಾಕಿದೆ.

Join Our Whatsapp Group

ತಿರುಪತಿ ಲಡ್ಡು ವಿಚಾರದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಹೇಳಿಕೆ ನಿಜಕ್ಕೂ ಆಶ್ಚರ್ಯ ತಂದಿದೆ, ಇದು ರಾಜಕೀಯ ಪ್ರೇರೇಪಿತವಾಗಿದ್ದು ಯಾವುದೋ ದುರುದ್ದೇಶದಿಂದಲೇ ಈ ಆರೋಪ ಮಾಡಲಾಗಿದೆ ಎಂದು ವೈಎಸ್ಆರ್ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.

ಅಮರಾವತಿಯಲ್ಲಿ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಈ ಹಿಂದೆ ವೈಎಸ್ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿಯಲ್ಲಿ ತಯಾರಾಗುತ್ತಿದ್ದ ಲಡ್ಡುಗಳಿಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ ಅಲ್ಲದೆ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿ ಲಡ್ಡುಗಳನ್ನು ತಯಾರು ಮಾಡಲಾಗಿತ್ತು, ಆದರೆ ನಮ್ಮ ಸರಕಾರ ಬಂಡ ಬಳಿಕ ಈಗ ಶುದ್ಧ ತುಪ್ಪವನ್ನು ಬಳಸಲಾಗುತ್ತಿದೆ ಮತ್ತು ದೇವಸ್ಥಾನದಲ್ಲಿ ಎಲ್ಲವನ್ನೂ ಸ್ವಚ್ಛಗೊಳಿಸಲಾಗಿದೆ, ಇದು ಸುಧಾರಿತ ಗುಣಮಟ್ಟಕ್ಕೆ ಕಾರಣವಾಗುತ್ತದೆ ಎಂದು ನಾಯ್ಡು ಹೇಳಿದರು.

ನಾಯ್ಡು ಆರೋಪದ ಬೆನ್ನಲ್ಲೇ ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಕೂಡ ಹಿಂದಿನ ಸರಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದಲ್ಲಿ ಕಳಪೆ ಗುಣಮಟ್ಟದ ಲಡ್ಡುಗಳನ್ನು ತಯಾರು ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ.

ಆದರೆ ಈ ಆರೋಪವನ್ನು ವೈಎಸ್ಆರ್ ಕಾಂಗ್ರೆಸ್ ತಳ್ಳಿಹಾಕಿದ್ದು ಇದು ಸತ್ಯಕ್ಕೆ ದೂರವಾದ ಹೇಳಿಕೆ ಇದರಲ್ಲಿ ರಾಜಕೀಯ ಮಾಡಲಾಗಿದೆ ಅಸಲಿಗೆ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.