ಹುಬ್ಬಳ್ಳಿ: ಬುಧವಾರ ಬೆಳಗ್ಗೆ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ ಕಾನ್ಸ್ ಟೇಬಲ್ ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಆದೇಶಿಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ ಹಾಗೂ ಹೆಡ್ ಕಾನ್ಸ್ ಟೇಬಲ್ ರೇಖಾ ಹಾವರಡ್ಡಿ ಅಮಾನತಾದ ಸಿಬ್ಬಂದಿ.
ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ವಿಶ್ವನಾಥ ಎಂಬಾತ ಆಕೆಯ ಮನೆಗೆ ನುಗ್ಗಿ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬಸ್ಥರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, “ಅಂಜಲಿಯನ್ನು ವಿಶ್ವನಾಥ ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದೇ ಇದ್ದಾಗ ನೇಹಾ ಹಿರೇಮಠಗೆ ಆದ ಹಾಗೆಯೇ ನಿನಗೂ ಆಗಲಿದೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಭಯಗೊಂಡಿದ್ದ ನಾವು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲು ಹೋಗಿದ್ದೆವು. ಆ ಸಂದರ್ಭದಲ್ಲಿ ಪೊಲೀಸರು “ಇವೆಲ್ಲಾ ಮೂಢನಂಬಿಕೆ” ಎಂದು ಹೇಳಿ ಘಟನೆಯನ್ನು ನಿರ್ಲರ್ಕ್ಷಿಸಿದ್ದರು.
ಅಂದೇ ಆರೋಪಿಯ ಮೇಲೆ ಕಠಿಣ ಕ್ರಮ ತೆಗೆದುಕೊಂಡು, ಪ್ರಕರಣ ದಾಖಲಿಸುತ್ತಿದ್ದರೆ ಹತ್ಯೆ ತಪ್ಪಿಸಬಹುದಿತ್ತು” ಎಂದು ಆರೋಪಿಸಿದ್ದಾರೆ.
ಈ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಕರ್ತವ್ಯ ಲೋಪ ತೋರಿರುವುದು ಕಂಡುಬಂದಿದೆ. ಹೀಗಾಗಿ ಪೊಲೀಸ್ ಕಮಿಷನರ್ ಕಠಿಣ ಕ್ರಮ ಕೈಗೊಂಡಿದ್ದಾರೆ.
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.