ಬೆಂಗಳೂರು: ಇಂದು ಸಂಜೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪೌರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಚೇರಿಗೆಳಿಗೆ ರಜೆ ಘೋಷಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದು, ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಆರ್ಥಿಕ ಇಲಾಖೆ, ಒಳಾಡಳಿತ ಇಲಾಖೆ, ಕಾನೂನು ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.