ಮನೆ ರಾಜ್ಯ ಆ.22 ರಿಂದ 26ರವರೆಗೆ ವಾರ್ಷಿಕ ವಿಶೇಷ ಶಿಬಿರ

ಆ.22 ರಿಂದ 26ರವರೆಗೆ ವಾರ್ಷಿಕ ವಿಶೇಷ ಶಿಬಿರ

0

ಮೈಸೂರು(Mysuru): ಮಹಾಜನ ವಿದ್ಯಾಸಂಸ್ಥೆ, ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಎಸ್.ಬಿ.ಆರ್.ಆರ್.ಮಹಾಜನ ಕಾನೂನು ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ವಾರ್ಷಿಕ ವಿಶೇಷ ಶಿಬಿರವನ್ನು ಆ.22 ರಿಂದ 26 ರವರೆಗೆ ಆಯೋಜಿಸಲಾಗಿದೆ.

ಹುಣಸೂರು ತಾಲ್ಲೂಕಿನ ರತ್ನಪುರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಬಿರ ನಡೆಯಲಿದ್ದು, ಆ.22 ರ ಸಂಜೆ 5 ಗಂಟೆಗೆ ಶಿಬಿರವನ್ನು ಶಾಸಕ ಹೆಚ್.ಪಿ.ಮಂಜುನಾಥ್ ಉದ್ಘಾಟಿಸಲಿದ್ದಾರೆ. ಹುಣಸೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣ.ಎಸ್. ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ್ ಕುಮಾರ್ ಇರಲಿದ್ದಾರೆ.

ಆ. 23 ರಂದು ಬೆಳಿಗ್ಗೆ 6.30ಕ್ಕೆ ಧ್ವಜಾರೋಹಣ ನಡೆಯಲಿದ್ದು, ಸಂಜೆ 5.30 ಗಂಟೆಗೆ `ಪ್ರಸ್ತುತ ಸಮಾಜಕ್ಕೆ ಅಂಬೇಡ್ಕರ್ ರವರ ಕೊಡುಗೆಗಳು’ ವಿಷಯಕ್ಕೆ ಸಂಬಂಧಿಸಿದಂತೆ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಹೆಚ್.ಆರ್.ತಿಮ್ಮೇಗೌಡ ಉಪನ್ಯಾಸ ನೀಡಲಿದ್ದಾರೆ. ಸಂಜೆ 6.30 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಆ.24 ರಂದು ಸಂಜೆ 5.30ಕ್ಕೆ ನಡೆಯುವ ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಚಾರ ನಿರ್ಮೂಲನ ಸಂಸ್ಥೆ ರಾಜ್ಯ ಉಪಾಧ್ಯಕ್ಷೆ ಭಾಗ್ಯ.ಬಿ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಸವಾಲ್ ಪತ್ರಿಕೆ ಮತ್ತು ಟಿವಿಯ ಸಂಪಾದಕರಾದ ಚಂಪಕಲಾ.ವಿ ಪಾಲ್ಗೊಳ್ಳಲಿದ್ದಾರೆ. ಗುತ್ತಿಗೆ ನೌಕರರ ಹಿತರಕ್ಷಣಾ ಸಮಿತಿಯ ರಾಜ್ಯ ಕಾರ್ಯದರ್ಶಿ ಅನಂತನಾರಾಯಣ ಹಾಗೂ  ರಾಜ್ಯ ಖಜಾಂಚಿ ಚಂದ್ರು.ಎಂ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

ಸಂಜೆ 6.30ಕ್ಕೆ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ `ಮಿತವಾದ ಆಹಾರವೇ ಉತ್ತಮ ಔಷಧ’ ಹಿರಿಯರ ನುಡಿಗಳನ್ನಾಡಲಿದ್ದಾರೆ.

ಆ.25 ರಂದು ಬೆಳಿಗ್ಗೆ 10 ಗಂಟೆಗೆ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಮಹಾಜನ ಸಂಸ್ಥೆಯ ಗೌರವ ಕಾರ್ಯದರ್ಶಿ ವಿಜಯಲಕ್ಷ್ಮಿ ಮುರುಳೀಧರ್ ಟಿ. ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ್ ಭೂತೆ ಭಾಗವಹಿಸಲಿದ್ದಾರೆ. `ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು’ ವಿಷಯ ಕುರಿತು ಹಿರಿಯ ವಕೀಲ ಹೆಚ್.ವಿ.ವೆಂಕಟೇಶ್ ಉಪನ್ಯಾಸ ನೀಡಲಿದ್ದಾರೆ.

ಆ. 26 ರಂದು ಬೆಳಿಗ್ಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕ ಹೆಚ್.ಪಿ.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿಂದಿನ ಲೇಖನಪಾಕಿಸ್ತಾನ: ಬಸ್ – ತೈಲ ಟ್ಯಾಂಕರ್ ಡಿಕ್ಕಿ- 20 ಜನರು ಸಜೀವ ದಹನ
ಮುಂದಿನ ಲೇಖನಶಿವಮೊಗ್ಗದಲ್ಲಿ ಫ್ಲೆಕ್ಸ್ ತೆರವು ವಿವಾದ: ಗುರುವಾರದವರೆಗೆ 144 ಸೆಕ್ಷನ್ ಜಾರಿ