ಮನೆ ರಾಜಕೀಯ 9 ವರ್ಷಗಳಲ್ಲಿ ರಾಜಧಾನಿಗೆ ಇನ್ನೊಂದು ವಿಮಾನ ನಿಲ್ದಾಣ: ಎಂ.ಬಿ. ಪಾಟೀಲ್‌

9 ವರ್ಷಗಳಲ್ಲಿ ರಾಜಧಾನಿಗೆ ಇನ್ನೊಂದು ವಿಮಾನ ನಿಲ್ದಾಣ: ಎಂ.ಬಿ. ಪಾಟೀಲ್‌

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಸಂಬಂಧದ ಸಾಧ್ಯಾಸಾಧ್ಯತೆಗಳ ಕುರಿತ ವರದಿ ಸಿದ್ಧಪಡಿಸುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ.

Join Our Whatsapp Group

ಕೆಂಪೇಗೌಡ ವಿಮಾನ ನಿಲ್ದಾಣದಿಂದ 150 ಕಿಮೀ ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣ ಆರಂಭಿ ಸಬಾರದು ಎಂದು ಏರ್‌ಪೋರ್ಟ್‌ ಸಂಸ್ಥೆ ಜತೆ ಮಾಡಿ ಕೊಂಡ ಒಪ್ಪಂದದ ಅವಧಿ ಮುಂದಿನ 9 ವರ್ಷ ಗಳಲ್ಲಿ ಮುಗಿಯಲಿದ್ದು, ಹೀಗಾಗಿ ಈಗಲೇ ಸಿದ್ಧತೆ ಮಾಡಿ ಕೊಳ್ಳಬೇಕು ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು. ಈ ಕುರಿತು ಹಿರಿಯ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು.

ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣವು 3ನೇ ಅತಿದಟ್ಟಣೆ ವಿಮಾನ ನಿಲ್ದಾಣ ಆಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ದಶಲಕ್ಷ ಪ್ರಯಾಣಿಕರು ಮತ್ತು 4 ಲಕ್ಷ ಟನ್‌ಗೂ ಹೆಚ್ಚು ಸರಕು-ಸಾಗಣೆ ನಿರ್ವ ಹಣೆ ಆಗಿದೆ. ಭವಿಷ್ಯದಲ್ಲಿ 2ನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂದು ಸಚಿವ ಪಾಟೀಲ ತಿಳಿಸಿದರು.

ನಗರದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಧ್ಯಾಸಾಧ್ಯತೆಗಳ ವರದಿ ಸಿದ್ಧಪಡಿಸುವಂತೆ ಸೂಚಿಸಿದರು. ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜತೆಗೆ ಆಂಧ್ರಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತ ರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ಹೊತ್ತಿಗೆ ಈ ಮಟ್ಟ ಮುಟ್ಟಲಿದೆ ಎಂದು ಸಚಿವರು ಹೇಳಿದರು.

ಇನ್ನು ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್‌ ಸಂಸ್ಥೆ, ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033) 150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿ ಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು 9 ವರ್ಷಗಳಲ್ಲಿ ಮುಗಿಯಲಿದೆ ಎಂದು ವಿವರಿಸಿದರು.

 “ಭೂ ಸ್ವಾಧೀನ, ಪರಿಹಾರ ಮತ್ತಿತರ ಪ್ರಕ್ರಿಯೆಗಳಿಗೆ ದೀರ್ಘ‌ ಸಮಯ ಹಿಡಿಯುತ್ತದೆ. ಆದ್ದರಿಂದ ನಾವು ಈಗಿನಿಂದಲೇ ಕಾರ್ಯಪ್ರ ವೃತ್ತರಾಗುತ್ತಿದ್ದೇವೆ. 2ನೇ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸುವುದರಿಂದ ರಾಜಧಾನಿಯ ಆಚೆಗೂ ಕೈಗಾರಿಕಾ ಬೆಳವಣಿಗೆ ಸಾಧ್ಯವಾಗಲಿದೆ’ ಎಂದು ಎಂ.ಬಿ. ಪಾಟೀಲ್‌ ಹೇಳಿದರು.