ಮನೆ ರಾಜ್ಯ ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ: 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ: 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

0

ರಾಯಚೂರು: ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ ಪ್ರಕರಣ ಸಂಭವಿಸಿದ್ದು, ಸುಮಾರು ಮೂರು ಸಾವಿರ ಜನರಿರುವ ಗ್ರಾಮದಲ್ಲಿ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿದ್ದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಿತ್ಯ ನಾಲ್ಕೈದು ಹೊಸ ಪ್ರಕರಣಗಳು ಉಲ್ಬಣವಾಗುತ್ತಿವೆ. ಗ್ರಾಮದಲ್ಲಿ ಸ್ವಚ್ಛತೆ ಬಗ್ಗೆ ಕ್ರಮವಹಿಸದೇ ಚಿತ್ತಾಪುರ ಪಂಚಾಯಿತಿ ದಿವ್ಯ ನಿರ್ಲಕ್ಷ್ಯ ಮಾಡಿದ್ದು, ಕಳೆದ ಒಂದು ವಾರದಿಂದ ಸಮಸ್ಯೆ ಉಲ್ಭವಾಗಿದ್ರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಸ್ವಚ್ಛತೆ ಬಗ್ಗೆ ಚಿತ್ತಾಪುರ ಪಂಚಾಯಿತಿ ಪಿಡಿಓ ಶಶಿಕಲಾ ಪಾಟೀಲ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಹಿಂದಿನ ಲೇಖನಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಗೋವಿಂದ ಕಾರಜೋಳ ಆಗ್ರಹ
ಮುಂದಿನ ಲೇಖನಆನೆಗಳ ಸಂಖ್ಯೆಯಲ್ಲೂ ಬಂಡೀಪುರ ಅಭಯಾರಣ್ಯಕ್ಕೆ ನಂಬರ್ ಓನ್ ಸ್ಥಾನ