ಮನೆ ಅಪರಾಧ ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

0

ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದ್ದು ಹೊಸ ವರ್ಷದ ಮೊದಲ ದಿನವೇ ಮತ್ತೂಬ್ಬಳು ಬಾಣಂತಿ, 5 ದಿನದ ಹಸುಗೂಸು ಮೃತಪಟ್ಟ ಘಟನೆ ಸಂಭವಿಸಿದೆ. ಇದರಿಂದ ಜಿಲ್ಲೆಯಲ್ಲಿ ಕಳೆದ 3 ತಿಂಗಳಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 11ಕ್ಕೇರಿದೆ.

Join Our Whatsapp Group

ದೇವದುರ್ಗ ತಾಲೂಕಿನ ಮಸಿದಾಪುರ ಗ್ರಾಮದ ಶಿವಲಿಂಗಮ್ಮ (21) ಮೃತಪಟ್ಟ ಬಾಣಂತಿ. ಡಿ. 25ರಂದು ರಿಮ್ಸ್‌ ಆಸ್ಪತ್ರೆಯಲ್ಲಿ ಅವರಿಗೆ ಹೆರಿಗೆಯಾಗಿತ್ತು. ಮಗುವಿಗೆ ಹುಷಾರಿಲ್ಲದ ಕಾರಣ 5 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ಮಗು ಮಂಗಳವಾರ ಮಧ್ಯರಾತ್ರಿ 2 ಗಂಟೆಗೆ ಮೃತಪಟ್ಟಿದೆ. ಈ ಸುದ್ದಿ ಕೇಳಿ ತಾಯಿ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾಳೆ.

ತಾಯಿ ಮತ್ತು ಮಗು ಕಳೆದುಕೊಂಡ ಕುಟುಂಬಸ್ಥರು, ವೈದ್ಯರ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಚ್‌ಒ ಬಾಣಂತಿಯರ ಸಾವಿನ ವಿಚಾರದಲ್ಲಿ ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ. ಮೃತಪಟ್ಟ ಮಹಿಳೆಗೆ ಮೂಛೆì ರೋಗವಿದ್ದು, ಪದೆ ಪದೇ ಫಿಟ್ಸ್‌ ಬಂದಿತ್ತು. ಇದರಲ್ಲಿ ವೈದ್ಯರ ವೈಫಲ್ಯ ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.