ಮನೆ ಅಪರಾಧ ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು

0

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಘಾತ ಮರಣ ಮೃದಂಗ ಮುಂದುವರೆದಿದ್ದು ಇಂದು, ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮೆಣಸಮಕ್ಕಿ ಗ್ರಾಮದ ರೈತ ಲಕ್ಷ್ಮಣ (52) ಎನ್ನುವವರು ಸಾವನಪ್ಪಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೆಣಸಮಕ್ಕಿ ಗ್ರಾಮದ ನಿವಾಸಿಯಾಗಿರುವ ರೈತ ಲಕ್ಷ್ಮಣ ಅವರು ನಿನ್ನೆ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಬಂದಿದ್ದಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಲಕ್ಷ್ಮಣ ಕುಟುಂಬಸ್ಥರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆಂಬುಲೆನ್ಸ್ ಬರುವಷ್ಟರಲ್ಲಿ ರೈತ ಲಕ್ಷ್ಮಣ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಕಳೆದ 46 ದಿನಗಳಲ್ಲಿ 38 ಮಂದಿ ಹೃದಯಾಘಾತದಿಂದ ಹಾಸನ ಜಿಲ್ಲೆ ಒಂದರಲ್ಲೇ ಸಾವನ್ನಪ್ಪಿದ್ದಾರೆ.