ಮನೆ ರಾಷ್ಟ್ರೀಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ:  ಓರ್ವ ವಲಸೆ ಕಾರ್ಮಿಕನಿಗೆ ಗಾಯ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ:  ಓರ್ವ ವಲಸೆ ಕಾರ್ಮಿಕನಿಗೆ ಗಾಯ

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ತ್ರಾಲ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ವಲಸೆ ಕಾರ್ಮಿಕ ಗಾಯಗೊಂಡಿರುವ ಘಟನೆ ಗುರುವಾರ(ಅ.24) ರಂದು ಬೆಳಿಗ್ಗೆ ನಡೆದಿದೆ.

Join Our Whatsapp Group

ಉತ್ತರ ಪ್ರದೇಶದ ಬಿಜ್ನೋರ್‌ನ ವಲಸೆ ಕಾರ್ಮಿಕ ಶುಭಂ ಕುಮಾರ್(19) ಕೈಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರೊಂದಿಗೆ ಒಂದು ವಾರದಲ್ಲಿ ಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆದ ಮೂರನೇ ದಾಳಿ ಇದಾಗಿದೆ.

ಕಳೆದ ಅಕ್ಟೋಬರ್ 20 ರಂದು ಕೇಂದ್ರಾಡಳಿತ ಪ್ರದೇಶದ ಗಂಡರ್ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವೈದ್ಯರು ಮತ್ತು ಆರು ವಲಸೆ ಕಾರ್ಮಿಕರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದರು.

ಇದಕ್ಕೂ ಮೊದಲು ಅಕ್ಟೋಬರ್ 18 ರಂದು ಶೋಪಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರು ಬಿಹಾರದ ವಲಸೆ ಕಾರ್ಮಿಕನ ಮೇಲೆ ಗುಂಡಿನ ದಾಳಿ ನಡೆಸಿದ್ದರು.