ಪಿ. ಆರ್. ಕೆ ಪ್ರೊಡಕ್ಷನ್ಸ್ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ನಿರ್ಮಾಣ ಮಾಡಿದೆ ಸಿಂಧು ಶ್ರೀನಿವಾಸಮೂರ್ತಿ ಚೊಚ್ಚಲ ನಿರ್ದೇಶನದ ‘ಆಚಾರ್ & ಕೋ’ ಸಿನಿಮಾ ಜುಲೈ 28ರಂದು ಬಿಡುಗಡೆಯಾಗಲಿದೆ.
ಈ ಚಿತ್ರ 60ರ ದಶಕದ ಸಾಮಾಜಿಕ ಮತ್ತು ಸಾಂಪ್ರದಾಯಿಕ ವ್ಯವಸ್ಥೆಯಲ್ಲಿ ವಿನೂತನ ಆಲೋಚನೆಯೊಂದನ್ನು ಯಶಸ್ವಿಯಾಗಿಸಲು ಹೋರಾಡುವ ಈ ಚಿತ್ರದಲ್ಲಿ ಭಾವನಾತ್ಮಕ ದೃಶ್ಯಗಳ ಜೊತೆ ಜೊತೆಗೆ ಹಾಸ್ಯವೂ ಇದೆ. ಆಸಕ್ತಿಕರ ಸನ್ನಿವೇಶಗಳ ಜೊತೆಗೆ ಸಮಾಜಕ್ಕೆ ಒಂದು ಪ್ರೇರಣೆಯೂ ಇದೆ.
ಈ ಚಿತ್ರದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದೆ. ‘ಆಚಾರ್ & ಕೋ’ ಚಿತ್ರದ ಮೂಲಕ ಪಿ.ಆರ್.ಕೆ ಪ್ರೊಡಕ್ಷನ್ಸ್ ಮತ್ತೊಂದು ಹೃದಯಸ್ಪರ್ಶಿ ಕಥೆಯನ್ನು ಪ್ರೇಕ್ಷಕರೆದುರು ತರುತ್ತಿದೆ.
ಈ ಸಿನಿಮಾ ಕಥೆಯು 60 ಮತ್ತು 70ರ ದಶಕದ ಬೆಂಗಳೂರನ್ನು ತೆರೆ ಮೇಲೆ ಸಮರ್ಥವಾಗಿ ಮರುಸೃಷ್ಟಿ ಮಾಡಲಾಗಿದೆ.
‘ಆಚಾರ್ & ಕೋ’ ಚಿತ್ರಕ್ಕೆ ಮಹಿಳೆಯರೇ ಕೆಲಸ ಮಾಡಿರುವುದು, ಈ ಚಿತ್ರಕ್ಕೆ ನಿರ್ಮಾಪಕರು, ನಿರ್ದೇಶಕರು, ಸಂಗೀತ ನಿರ್ದೇಶಕರು, ಮುಖ್ಯ ಪಾತ್ರಧಾರಿ, ಸೌಂಡ್ ಇಂಜಿನಿಯರ್, ವಸ್ತ್ರ ವಿನ್ಯಾಸಕರು, ಕ್ರಿಯಾಶೀಲ ನಿರ್ಮಾಪಕರು ಸೇರಿದಂತೆ ಹಲವು ವಿಭಾಗಗಳಲ್ಲಿ ಮಹಿಳೆಯರೇ ಕೆಲಸ ಮಾಡಿದ್ದಾರೆ. ಸಿಂಧು ಶ್ರೀ ನಿವಾಸಮೂರ್ತಿ ಅವರು ಈ ಚಿತ್ರದ ಬರವಣಿಗೆ, ನಿರ್ದೇಶನದ ಜವಾಬ್ದಾರಿಯ ಜೊತೆಗೆ ತಾವೇ ಮುಖ್ಯ ಪಾತ್ರವನ್ನೂ ನಿರ್ವಹಿಸಿದ್ದಾರೆ.
ಹಾಡುಗಳು, ಟ್ರೇಲರ್ ಸೇರಿದಂತೆ ಇನ್ನಿತರೆ ತುಣುಕುಗಳನ್ನು ಮುಂಬರುವ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ, ಪಿ ಆರ್ ಕೆ ಪ್ರೊಡಕ್ಷನ್ಸ್ ನ ಅಧಿಕೃತ ವೆಬ್ ಸೈಟ್, ಚಾನಲ್ ಗಳ ಮೂಲ ವೀಕ್ಷಣೆಗೆ ಲಭ್ಯಗೊಳಿಸಲಾಗುವುದು ಎಂದು ಪಿ ಆರ್ ಕೆ ಪ್ರೊಡಕ್ಷನ್ಸ್ ಹೇಳಿದೆ.