ಮನೆ ರಾಜಕೀಯ ಇಡಿಯಿಂದ ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್

ಇಡಿಯಿಂದ ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್

0

ನವದೆಹಲಿ(NewDelhi): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಹುಲ್‌ ಗಾಂಧಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದೆ.  

ಜೂನ್ 1ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿಗೆ ಜೂನ್ 8ಕ್ಕೂ ಮೊದಲು ಫೆಡರಲ್ ಏಜೆನ್ಸಿಯ ಮುಂದೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.‌ ಆದರೀಗ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಮನ್ಸ್ ನೀಡಿ ಜೂನ್ 13ರಂದು ದೆಹಲಿಯ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.

ಆದರೀಗ ರಾಹುಲ್ ಗಾಂಧಿ ಅವರಿಗೆ ಜುಲೈ 13ರಂದು ವಿಚಾರಣೆಗೆ ಬರುವಂತೆ ಹೊಸ ಸಮನ್ಸ್ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಯಂಗ್ ಇಂಡಿಯನ್‌ನಲ್ಲಿ ನಡೆದಿರುವ ಹಣಕಾಸು ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದ್ದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಇಬ್ಬರಿಗೂ ಸಮನ್ಸ್ ನೀಡಿದೆ.

2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆದಾಯ ತೆರಿಗೆ ಇಲಾಖೆ ತನಿಖೆಯನ್ನು ಆಧರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು.
ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಕಾಂಗ್ರೆಸ್‌ಗೆ ನೀಡಬೇಕಿದ್ದ 90.25 ಕೋಟಿ ರೂ.ಗಳನ್ನು ವಸೂಲಿ ಮಾಡುವ ಹಕ್ಕನ್ನು ಪಡೆಯಲು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಕೇವಲ 50 ಲಕ್ಷ ರೂಪಾಯಿಗಳನ್ನು ಪಾವತಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಆರೋಪಿಸಿದ್ದರು.
ಜೂ.8 ರಂದು ವಿಚಾರಣೆಗೆ ಹಾಜರು
ಸೋನಿಯಾ ಗಾಂಧಿ ಅವರನ್ನು ಜೂನ್ 8 ರಂದು ಫೆಡರಲ್ ಏಜೆನ್ಸಿಯ ಮುಂದೆ ಹಾಜರಾಗುವಂತೆ ಕೇಳಲಾಗಿದ್ದು, ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಗುಣಮುಖರಾದ ಬಳಿಕ ವಿಚಾರಣೆಗೆ ಹಾಜರಾಗಲಿದ್ದಾರೆ. ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಲ್ಲಿದ್ದು ದೇಶಕ್ಕೆ ವಾಪಸ್ ಆದ ಬಳಿಕ ಅವರು ಕೂಡ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ತಿಳಿಸಿದ್ದರು.