ಮನೆ ರಾಷ್ಟ್ರೀಯ ಒಡಿಶಾದ ಬರ್ಗಢ್ ನಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು

ಒಡಿಶಾದ ಬರ್ಗಢ್ ನಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು

0

ಹೊಸದಿಲ್ಲಿ: ಒಡಿಶಾದ ಬಾಲಸೋರ್‌ ನಲ್ಲಿ ನಡೆದ ಭೀಕರ ರೈಲು ಅಪಘಾತ ಮಾಸುವ ಮುನ್ನವೇ ಸುಣ್ಣದ ಕಲ್ಲುಗಳನ್ನು ಸಾಗಿಸುತ್ತಿದ್ದ ಮತ್ತೊಂದು ರೈಲು ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ.

Join Our Whatsapp Group

ಬಾಲಸೋರ್ ಘಟನಾ ಸ್ಥಳದಿಂದ ಸಮಾರು 500 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.

ಡುಂಗ್ರಿ ಸುಣ್ಣದ ಗಣಿಗಳು ಮತ್ತು ಎಸಿಸಿ ಬರ್ಗಢ್‌ ನ ಸಿಮೆಂಟ್ ಸ್ಥಾವರದ ನಡುವೆ ಖಾಸಗಿ ನ್ಯಾರೋ ಗೇಜ್ ರೈಲು ಮಾರ್ಗವಿದೆ. ಲೈನ್, ವ್ಯಾಗನ್‌ ಗಳು ಮತ್ತು ಲೊಕೊಮೊಟಿವ್ ಎಲ್ಲವೂ ಖಾಸಗಿಯಾಗಿದ್ದು, ಭಾರತೀಯ ರೈಲ್ವೆ ವ್ಯವಸ್ಥೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಕೆಲವು ಬೋಗಿಗಳು ಮಾತ್ರ ಹಳಿತಪ್ಪಿವೆ ಮತ್ತು ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.