ಮನೆ ಅಪರಾಧ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

0

ಬಳ್ಳಾರಿ: ಹೆರಿಗೆ ಬಳಿಕ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಬಾಣಂತಿ ಸೋಮವಾರ ರಾತ್ರಿ ಮೃತಪಟ್ಟಿದ್ದು ಬಾಣಂತಿಯರ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

Join Our Whatsapp Group

ಹೊಸಪೇಟೆಯ ಮುಸ್ಕಾನ್‌ (22) ಮೃತಪಟ್ಟವರು. ನ. 10ರಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ಹಲವು ಮಹಿಳೆಯರು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿಕೊಂಡಿದ್ದು 10 ಮಂದಿ ಅಸ್ವಸ್ಥರಾಗಿದ್ದರು. ಅವರಲ್ಲಿ ಅಂದೇ ಇಬ್ಬರು ಮೃತಪಟ್ಟಿದ್ದು, ಉಳಿದವರನ್ನು “ಬಿಮ್ಸ್‌’ಗೆ ದಾಖಲಿಸಲಾಗಿತ್ತು.

ನ. 14ರಂದು ಮಧ್ಯರಾತ್ರಿ ಎಮ್ಮಿಗನೂರು ಗ್ರಾಮದ ರೋಜಮ್ಮ (19) ಮೃತಪಟ್ಟಿದ್ದರು.

ಮುಸ್ಕಾನ್‌ ಕೂಡ ನ. 11ರಂದು “ಬಿಮ್ಸ್‌’ಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸತತ 15 ದಿನಗಳ ಕಾಲ ಚಿಕಿತ್ಸೆ ಪಡೆದರೂ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.