ಮನೆ ಅಪರಾಧ ರಾಯಚೂರಿನಲ್ಲಿ ಮತ್ತೋರ್ವ ಬಾಣಂತಿ ಸಾವು

ರಾಯಚೂರಿನಲ್ಲಿ ಮತ್ತೋರ್ವ ಬಾಣಂತಿ ಸಾವು

0

ರಾಯಚೂರು: ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ.

Join Our Whatsapp Group

ಸರಸ್ವತಿ (24) ಮೃತ ಬಾಣಂತಿ. ಜಿಲ್ಲೆಯಲ್ಲಿ 3 ತಿಂಗಳಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಾಣಂತಿ ಸರಸ್ವತಿ ಜನವರಿ 2ರಂದು ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಸರಸ್ವತಿ ಅವರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು.

ಹೆರಿಗೆ ಬಳಿಕ ಅಧಿಕ ರಕ್ತದೊತ್ತದ, ಇನ್ಫೆಕ್ಷನ್, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲಿದ ಸರಸ್ವತಿ ಜನವರಿ 5ರಂದು ಕೊನೆಯುಸಿರು ಎಳೆದಿದ್ದಾರೆ. ಸರಸ್ವತಿ 4ನೇ ಮಗುವಿಗೆ ಜನ್ಮನೀಡಿದ್ದರು. ಮಗುವಿಗೆ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

1 ತಿಂಗಳಲ್ಲಿ ನಾಲ್ವರು ಬಾಣಂತಿಯರ ಸಾವು

ಸಿಂಧನೂರು ತಾಲೂಕು ಆಸ್ಪತ್ರೆಗೆ ಅಕ್ಟೋಬರ್​ ತಿಂಗಳಲ್ಲಿ ದಾಖಲಾಗಿದ್ದ ನಾಲ್ವರು ಬಾಣಂತಿಯರು ಸಿಸೇರಿಯನ್​ ಬಳಿಕ ಮೃತಪಟ್ಟಿದ್ದರು. ರಾಯಚೂರು ಜಿಲ್ಲೆಯವರೇಯಾದ ಮೌಸಂಬಿ ಮಂಡಲ್​, ಚನ್ನಮ್ಮ, ಚಂದ್ರಕಲಾ, ರೇಣುಕಮ್ಮ ಮೃತ ಬಾಣಂತಿಯರು. ಈ ನಾಲ್ವರು ಬಾಣಂತಿಯರಿಗೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗಿದ್ದ IVದ್ರಾವಣವೇ ನೀಡಲಾಗಿತ್ತು ಎಂದು ಹೇಳಲಾಗಿದೆ.

ತನಿಖೆ ನಡೆಸುತ್ತಿರುವ ಸರ್ಕಾರ

ಬಳ್ಳಾರಿ, ರಾಯಚೂರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿನ ಬಾಣಂತಿಯರ ಸಾವಿನ ಸಂಖ್ಯೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಎಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ? ಇವರ ಸಾವಿಗೆ ಕಾರಣವೇನು? ಎಂಬುವುದರ ಕುರಿತು ಸಮಗ್ರವಾಗಿ ತನಿಖೆ ನಡೆಸುತ್ತಿದ್ದು, ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿದೆ.