ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆಂಬ ಆರೋಪ ಹಿನ್ನೆಲೆ ಮಾಜಿ ಶಾಸಕ ವಾಸು ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಿ ಮಾಜಿ ನಗರಸಭೆ ಸದಸ್ಯ ಆರ್.ಸುನಂದಕುಮಾರ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಮೂರ್ತಿಗೆ ಪತ್ರ ಬರೆದಿದ್ದಾರೆ.
ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಇದ್ದುಕೊಂಡು ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮ ಮಗ ಸ್ಪರ್ಧಿಸಿರುವ ಕಾರಣ ಅವರ ಪರ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸುನಂದಕುಮಾರ್ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
Saval TV on YouTube