ರಾಯಚೂರು(Raichuru): ಹಿಂದುಳಿದ ಪ್ರದೇಶದಲ್ಲಿಯೇ ಏಮ್ಸ್ ಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಸಿರಿಧಾನ್ಯಗಳ ಅಭಿಯಾನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಏಮ್ಸ್ ಸ್ಥಾಪಿಸುವುದಕ್ಕೆ ಕೇಂದ್ರ ಸರ್ಕಾರವೇ ಸಮೀಕ್ಷೆ ನಡೆಸಿ ಸೂಕ್ತ ಸ್ಥಳ ನಿರ್ಣಯ ಮಾಡುವಂತೆ ಕೇಳಿಕೊಳ್ಳಲಾಗಿದೆ ಎಂದರು.
ರಾಯಚೂರು 371-ಜೆ ವ್ಯಾಪ್ತಿಯಲ್ಲಿರುವ ಜಿಲ್ಲೆ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಲ್ಲೂ ಇದೆ. ಹೀಗಾಗಿ ಏಮ್ಸ್ ಸ್ಥಾಪಿಸಲು ಸರಿಯಾದ ಸ್ಥಳವೂ ಆಗಿದೆ. ಈ ಬಗ್ಗೆ ಕೇಂದ್ರವು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.