ಬೆಂಗಳೂರು (Bengaluru): ಜಲ ಸಂಪನ್ಮೂಲ ಇಲಾಖೆಯ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 155 ಹುದ್ದೆಗಳು ಖಾಲಿ ಇವೆ. ಇತರೆ : 29, ಮಹಿಳಾ: 47, ಗ್ರಾಮೀಣ: 39, ಮಾಜಿ ಸೈನಿಕ : 15, ಕನ್ನಡ ಮಾಧ್ಯಮ ಅಭ್ಯರ್ಥಿ: 8, ತೃತೀಯ ಲಿಂಗ ಅಭ್ಯರ್ಥಿ: 2, ಅಂಗವಿಕಲತೆ ಅಭ್ಯರ್ಥಿ: 8, ಯೋಜನಾ ನಿರಾಶ್ರಿತ ಅಭ್ಯರ್ಥಿ: 7 ಎಂದು ಹುದ್ದೆಗಳನ್ನು ವಿಂಗಡಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ. ವಯಸ್ಸು ಮತ್ತು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಅರ್ಹತೆ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು. ಕನಿಷ್ಠ 18 ರಿಂದ ಗರಿಷ್ಠ 40 ವರ್ಷ ಮೀರಿರಬಾರದು.
ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಅಥವಾ 3 ವರ್ಷದ ಡಿಪ್ಲೊಮ / 2 ವರ್ಷದ ಐಟಿಐ ಪಾಸ್ ಜತೆಗೆ ಎನ್‌ಐಒಎಸ್’ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ಅಥವಾ ಪದವಿಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ’ಗೆ ತತ್ಸಮಾನವೆಂದು ಪರಿಗಣಿಸಲಾಗುವುದು.
ಜುಲೈ 11 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಗಸ್ಟ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಲಸಂಪನ್ಮೂಲ ಇಲಾಖೆ ಅಧಿಕೃತ ವೆಬ್‌ಸೈಟ್ ವಿಳಾಸ https://waterresouces.karnataka.gov.in ಗೆ ಭೇಟಿ ನೀಡಿ.