ಮನೆ ಉದ್ಯೋಗ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 32 ಹುದ್ದೆಗಳು ಖಾಲಿ ಇವೆ. ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): 16 ಹುದ್ದೆ, ಹಿರಿಯ ಸಹಾಯಕರು: 1 ಹುದ್ದೆ, ಕಿರಿಯ ಸಹಾಯಕರು: 9 ಹುದ್ದೆ, ಬೀಜ ಸಹಾಯಕರು: 6 ಹುದ್ದೆಗಳು ಖಾಲಿ ಇವೆ.

ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ) ಹುದ್ದೆಗೆ ಬಿಎಸ್ಸಿ ಇನ್‌ ಕೃಷಿ ಪದವಿ, ಹಿರಿಯ ಸಹಾಯಕರು ಹಾಗೂ ಕಿರಿಯ ಸಹಾಯಕರ ಹುದ್ದೆಗೆ ಬಿಕಾಂ/ಬಿಬಿಎಂ ಪದವಿ ಜತೆಗೆ, ಟ್ಯಾಲಿ ಸರ್ಟಿಫಿಕೇಟ್‌, ಬೀಜ ಸಹಾಯಕರ ಹುದ್ದೆಗೆ ಕೃಷಿಯಲ್ಲಿ 2 ವರ್ಷದ ಡಿಪ್ಲೊಮ ಪಾಸ್ ಮಾಡಿರಬೇಕು.

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಅರ್ಹತೆ ವರ್ಗಾವಾರು ಕೆಳಗಿನಂತಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ https://cetonline.karnataka.gov.in/kea/ksscl ಗೆ ಭೇಟಿ ನೀಡಿ.

ಅರ್ಜಿಯನ್ನು ಸಲ್ಲಿಸಲು ಆರಂಭಿಕ ದಿನಾಂಕ ಜೂ. 22 ಆಗಿದ್ದು, ಕೊನೆಯ ದಿನ ಜುಲೈ 20 ಆಗಿದೆ. ಅರ್ಜಿ ಸಲ್ಲಿಸಿದವರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಮೆರಿಟ್ ಆಧಾರದಲ್ಲಿ ಆಯ್ಕೆ ನಡೆಸಲಾಗುತ್ತದೆ.