ಮನೆ ಉದ್ಯೋಗ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 118 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 118 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

0

ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 118 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್ ಹುದ್ದೆಗಳ ನೇಮಕಾತಿಗೆ ಮುಂದಾಗಲಾಗಿದೆ. ಕೇಂದ್ರ ಸರ್ಕಾರದ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 5 ಆಗಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರ ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲು ಮುಂದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಸಂಸ್ಥೆಯ ಹೆಸರು: ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ)
ಹುದ್ದೆಯ ಹೆಸರು: ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್
ಹುದ್ದೆಗಳ ಸಂಖ್ಯೆ: 138
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: 105000 ರೂ. ಪ್ರತಿ ತಿಂಗಳು

ವಯಸ್ಸಿನ ಮಿತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  45 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಭಾರತೀಯ ಕ್ರೀಡಾ ಪ್ರಾಧಿಕಾರದ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ

ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05 ಆಗಸ್ಟ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಸೆಪ್ಟೆಂಬರ್​​ 2022

ಅಧಿಕೃತ ವೆಬ್‌ಸೈಟ್: sportsauthorityofindia.nic.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ.

ಹಿಂದಿನ ಲೇಖನಮುರುಘಾ ಮಠದಿಂದ ನೀಡಿದ್ದ ಬಸವ ಶ್ರೀ ಪ್ರಶಸ್ತಿ ವಾಪಸ್‌ ನೀಡುವುದಾಗಿ ಘೋಷಿಸಿದ ಪತ್ರಕರ್ತ ಪಿ.ಸಾಯಿನಾಥ್‌
ಮುಂದಿನ ಲೇಖನಹುಬ್ಬಳ್ಳಿಯ ಕಾನೂನು ವಿವಿ ಕುಲಪತಿಯಾಗಿ ಡಾ.ಸಿ.ಬಸವರಾಜು ನೇಮಕ