ಗುಪ್ತಚರ ಇಲಾಖೆಯಲ್ಲಿ 1671 ಸೆಕ್ಯುರಿಟಿ ಅಸಿಸ್ಟೆಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ನವೆಂಬರ್ 25, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್– 1521
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)/ ಜನರಲ್– 150
ಅರ್ಹತಾ ಮಾನದಂಡಗಳೇನು?
ವಿದ್ಯಾರ್ಹತೆ:
ಗುಪ್ತಚರ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು.
ವಯೋಮಿತಿ:
ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್: 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)/ ಜನರಲ್: 18-25 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 450 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಪರೀಕ್ಷಾ ಶುಲ್ಕ:
ಪುರುಷ ಅಭ್ಯರ್ಥಿಗಳು(ಜನರಲ್), EWS & OBC- 50 ರೂ.
ಪಾವತಿಸುವ ವಿಧಾನ: ಆನ್ಲೈನ್/ ಎಸ್’ಬಿಐ ಚಲನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಪರ್ಸನಾಲಿಟಿ ಟೆಸ್ಟ್
ಸಂದರ್ಶನ
ವೇತನ:
ಸೆಕ್ಯುರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್– ಮಾಸಿಕ ₹ 21,700-69,100
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)/ ಜನರಲ್– ಮಾಸಿಕ ₹ 18,000-56,900
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ & ಆನ್ಲೈನ್ ಮೂಲಕ ಅರ್ಜಿ ಶುಲ್ಕ ಕಟ್ಟಲು ಕೊನೆಯ ದಿನಾಂಕ: 25/11/2022
ಎಸ್’ಬಿಐ ಚಲನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 29/11/2022