ಮೈಸೂರು:- 2021 ಮತ್ತು 22 ನೇ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದ್ದು, ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ/ ಪದಕ ವಿಜೇತರಾಗಿದ್ದಲ್ಲಿ 50 ಸಾವಿರ ರೂ.ಗಳ ನಗದು ಪುರಸ್ಕಾರವನ್ನು ನೀಡಲಾಗುವುದು.
ಕ್ರೀಡಾಕೂಟಗಳಲ್ಲಿ ಪದಕ ಪಡೆಯುವ ಕ್ರೀಡಾಪಟುಗಳಿಗೆ ವಾರ್ಷಿಕ ಗರಿಷ್ಠ 5 ಲಕ್ಷ ಅಥವಾ ವಾರ್ಷಿಕ ಅತ್ಯುತ್ತಮ ಎರಡು ಸಾಧನೆಗಳನ್ನು ಪರಿಗಣಿಸಿ, ಯಾವುದು ಕಡಿಮೆಯೋ ಆ ಮೊತ್ತಕ್ಕೆ ನಗದು ಬಹುಮಾನವನ್ನು ನೀಡಲಾಗುವುದು. ಅದರಂತೆ ಕರ್ನಾಟಕವನ್ನು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಮತ್ತು ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಿ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಅರ್ಹ ಕ್ರೀಡಾಪಟುಗಳು ನವೆಂಬರ್ 25 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಅಥವಾ ದೂ.ಸಂ: 0821-2564179 ಅನ್ನು ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.