ಮನೆ ಉದ್ಯೋಗ ಕೋಲಾರ, ಗದಗ, ಚಾಮರಾಜನಗರದಲ್ಲಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ, ಗದಗ, ಚಾಮರಾಜನಗರದಲ್ಲಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ರಾಜ್ಯದ ಜಿಲ್ಲಾ ಪಂಚಾಯತ್​ನಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಾಲ ಕಾಲಕ್ಕೆ ಅಧಿಸೂಚನೆ ಹೊರಡಿಸಲಾಗುವುದು. ಎಸ್​ಎಸ್​ಎಲ್​ಸಿ, ಪಿಯುಸಿ ಪದವೀಧರ ಅಭ್ಯರ್ಥಿಗಳಿಗೆ ಈ ಮೂಲಕ ಜಿಲ್ಲೆಯಲ್ಲಿ ಉದ್ಯೋಗ ಅವಕಾಶ ದೊರೆಯಲಿದೆ. ಪ್ರಸ್ತುತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗದಗದಲ್ಲಿದೆ ಎಡಿಪಿಎಂ ಹುದ್ದೆ
ಗದಗ ಜಿಲ್ಲಾ ಪಂಚಾಯತ್​ನಲ್ಲಿ  ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ. ಇ-ಪಂಚಾಯತ್​ ಯೋಜನೆ ಅಡಿ ಕಾರ್ಯ ನಿರ್ವಹಿಸಲು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಪದವಿ ಹೊಂದಿರುವ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಭರ್ತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 16 ಆಗಿದೆ.
ಕೋಲಾರದಲ್ಲಿದೆ 46 ಹುದ್ದೆಗಳು
ಕೋಲಾರ ಜಿಲ್ಲಾ ಪಂಚಾಯತ್​ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಗ್ರಾಮ ಪಂಚಾಯತ್​ನಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಟೆಂಡೆಂಟ್​, ಡಾಟಾ ಎಂಟ್ರಿ ಆಪರೇಟರ್​​ ಮತ್ತು ಕ್ಲರ್ಕ್ ಸೇರಿದಂತೆ ಒಟ್ಟು 46 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆಯನ್ನು ಆಫ್​ಲೈನ್​ ಮೂಲಕ ಮಾಡಬೇಕಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 24 ಆಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಹಿರಿಯ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ಈ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 17 ಆಗಿದೆ.

ವಿಶೇಷ ಸೂಚನೆ: ಮೇಲ್ಕಂಡ ಹುದ್ದೆಗಳ ಲಿಂಕ್​ಗಳನ್ನು ಕ್ಲಿಕ್​ ಮಾಡುವ ಮೂಲಕ ಆಯಾ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ

ಅರ್ಜಿ ಸಲ್ಲಿಕೆ ಪ್ರಕ್ರಿಯೆ
ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.

  • ಟ್ಯಾಗ್ಗಳು
  • jobs
ಹಿಂದಿನ ಲೇಖನಅಟಲ್‌ ಬಿಹಾರಿ ವಾಜಪೇಯಿ ಪುಣ್ಯಸ್ಮರಣೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಗಣ್ಯರಿಂದ ಗೌರವ ನಮನ
ಮುಂದಿನ ಲೇಖನಪಥ ಸಂಚಲನ ನಡೆಸಿ ಮೆಚ್ಚುಗೆಗೆ ಪಾತ್ರರಾದ ಪೌರಕಾರ್ಮಿಕರು