ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಬ್ಯಾಂಕ್ ಗಳಲ್ಲಿನ ಕ್ಲರ್ಕ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ibps.in ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿ ವಿವರಗಳು:
ಬ್ಯಾಂಕ್ ಹೆಸರು : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಗಳ ಹೆಸರು: ಕ್ಲರ್ಕ್
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವೀಧರರಾಗಿರಬೇಕು. ಹಾಗೆಯೇ ಕಂಪ್ಯೂಟರ್ ಬಳಕೆಯಲ್ಲಿ ಪ್ರವೀಣರಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 28 ವರ್ಷಕ್ಕಿಂತ ಹೆಚ್ಚಿರಬಾರದು.
ಮಾಸಿಕ ವೇತನ:
ಈ ಹುದ್ದೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮನೆ ಬಾಡಿಗೆ ಭತ್ಯೆ, ತುಟ್ಟಿಭತ್ಯೆ, ವೈದ್ಯಕೀಯ ಭತ್ಯೆ ಮತ್ತು ಸಾರಿಗೆ ಭತ್ಯೆಯೊಂದಿಗೆ ತಿಂಗಳಿಗೆ ರೂ. 19,900 ರಿಂದ ರೂ. 47920 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ ಕರೆಯಲಾಗುತ್ತದೆ. ಇದಾದ ಬಳಿಕ ಮುಖ್ಯ ಪರೀಕ್ಷೆ ಇರಲಿದ್ದು, ಆ ಬಳಿಕ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-07-2023
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21-07-2023
ಪರೀಕ್ಷೆಯ ಪೂರ್ವ ತರಬೇತಿಯ ದಿನಾಂಕ: ಆಗಸ್ಟ್ 2023
ಆನ್ ಲೈನ್ ಪರೀಕ್ಷೆಯ ದಿನಾಂಕ – ಪೂರ್ವಭಾವಿ: ಆಗಸ್ಟ್/ಸೆಪ್ಟೆಂಬರ್ 2023
ಆನ್ ಲೈನ್ ಪರೀಕ್ಷೆಯ ಫಲಿತಾಂಶದ ದಿನಾಂಕ – ಪೂರ್ವಭಾವಿ: ಸೆಪ್ಟೆಂಬರ್/ಅಕ್ಟೋಬರ್ 2023
ಆನ್ ಲೈನ್ ಪರೀಕ್ಷೆಯ ದಿನಾಂಕ: ಅಕ್ಟೋಬರ್/2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.