ಮನೆ ಕಾನೂನು ನ್ಯಾಯಾಂಗ ಆಡಳಿತ ತರಬೇತಿಗೆ ಅರ್ಜಿ ಆಹ್ವಾನ

ನ್ಯಾಯಾಂಗ ಆಡಳಿತ ತರಬೇತಿಗೆ ಅರ್ಜಿ ಆಹ್ವಾನ

0

ಮೈಸೂರು: 2024-25ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Join Our Whatsapp Group

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೈಸೂರು ಜಿಲ್ಲೆಯವರಾಗಿರುವ 10 ಅಭ್ಯರ್ಥಿಗಳನ್ನು ಮಾತ್ರ ತರಬೇತಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿರಬೇಕು. ತರಬೇತಿ ಅವಧಿಯು 4 ವರ್ಷಗಳಾಗಿದ್ದು, ತರಬೇತಿ ಅವಧಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 4000 ಗಳ ತರಬೇತಿ ಭತ್ಯೆಯನ್ನು ಮಂಜೂರು ಮಾಡಲಾಗುವುದು. ಅಭ್ಯರ್ಥಿಯು ಅರ್ಜಿ ಜೊತೆಗೆ ಜಾತಿ/ಆದಾಯ ದೃಢೀಕರಣ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಕಾನೂನು ಪದವಿಯಲ್ಲಿ ಪಡೆದ ಅಂಕಪಟ್ಟಿಗಳ ದೃಢೀಕರಣ ಪತ್ರಗಳು ಮತ್ತು ಪ್ರಾಕ್ಟಿಸ್ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು.

ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ. 3,50,000 ಹಾಗೂ ಪ್ರವರ್ಗ-2ಎ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.2,50,000 ಗಳನ್ನು ಹೊಂದಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ (ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಕ್ಕೆ) ಇರುತ್ತದೆ.

ಆಯ್ಕೆ ಸಮಿತಿ ಸಂದರ್ಶನ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಚಾಲ್ತಿ ನಿಯಮದ ಪ್ರಕಾರ ಆಯ್ಕೆ ಮಾಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ಸಿದ್ದಾರ್ಥನಗರದಲ್ಲಿರುವ ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣ ಕಟ್ಟಡದಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜುಲೈ 20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ.ಸಂ: 0821-2342917 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.