ಮನೆ ಕಾನೂನು ಕಾನೂನು ಪದವೀಧರ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಕಾನೂನು ಪದವೀಧರ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

0

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ 2024-25 ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Join Our Whatsapp Group

ಆಸಕ್ತ ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.sw.kar.nic.in ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ನೊಂದಾಯಿಸಿದ ನಂತರ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳ ದೃಢೀಕರಣದೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ ಮತ್ತು ಆಯಾಯ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2344661 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.